ಮಂಡ್ಯ: ಮೈಸೂರು ಆಕಾಶವಾಣಿ ಮತ್ತು ಮಂಡ್ಯದ ಕರ್ನಾಟಕ ಸಂಘದ ಸಹಯೋಗದಲ್ಲಿ ಮುಂಗಾರು ಮಳೆ–ಇಳೆ: ಕಾವ್ಯಧಾರೆ ಮತ್ತು ಬಾನುಲಿ ಬರವಣಿಗೆ ಕಾರ್ಯಾಗಾರವನ್ನು ಮೇ 21ರಂದು ಬೆಳಿಗ್ಗೆ 10.30ಕ್ಕೆ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ವಿಶ್ರಾಂತ ಪ್ರಾಂಶುಪಾಲರಾದ ಲೀಲಾ ಅಪ್ಪಾಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆಕಾಶವಾಣಿಯ ಸಹಾಯಕ ನಿರ್ದೇಶಕ ಮಂಜುನಾಥ್ ಎನ್. ಬೇದ್ರೆ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಹಾಗೂ ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ಎಂ.ಕೇಶವಮೂರ್ತಿ ಪಾಲ್ಗೊಳ್ಳಲಿದ್ದಾರೆ.

ಕವಿಗೋಷ್ಠಿಯಲ್ಲಿ 20 ಕವಿಗಳು ಕವನ ವಾಚನ ಮಾಡಲಿದ್ದಾರೆ. ಅದೇ ದಿನ ಮಧ್ಯಾಹ್ನ 2.30ರಿಂದ 4.30ರವರೆಗೆ ಯುವ ಬರಹಗಾರರಿಗೋಸ್ಕರ ‘ಬಾನುಲಿ ಬರವಣಿಗೆ - ಕಾರ್ಯಾಗಾರ’ ನಡೆಯಲಿದೆ. ಬಾನುಲಿ ನಾಟಕಗಳು, ವಿಶೇಷ ರೂಪಕ, ಸಾಕ್ಷ್ಯಚಿತ್ರ, ಚಿಂತನ ಮತ್ತು ಭಾಷಣ ಕುರಿತು ಆಕಾಶವಾಣಿ ಅಧಿಕಾರಿಗಳು ಕಾರ್ಯಾಗಾರ ನಡೆಸಿಕೊಡಲಿದ್ದಾರೆ.

100 ಯುವ ಬರಹಗಾರರಿಗೆ ಭಾಗವಹಿಸಲು ಅವಕಾಶವಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-40-1333200281

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.