ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ ಪಟೇಲ್ ಪಾಂಡು ಅವರು ಐದು ನಿರ್ಣಯಗಳನ್ನು ಮಂಡಿಸಿದರು.

1) ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಎಲ್ಲ ಉಪ– ಬಂಧಗಳು ಮತ್ತು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವು ಸಮಗ್ರವಾಗಿ ಜಾರಿಗೆ ಬರಬೇಕಿದ್ದು, ಕೂಡಲೇ ಅನುಷ್ಠಾನ ಆಗಬೇಕು. ಸ್ವಾಯತ್ತತೆ ಹೊಂದಿರುವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರನ್ನು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ‘ರಾಜ್ಯ ಮಟ್ಟದ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲು ಸೂಕ್ತ ತಿದ್ದುಪಡಿ ತರಬೇಕು

2) ರಾಜ್ಯದಲ್ಲಿರುವ ಸರ್ಕಾರದ ಎಲ್ಲ ಕನ್ನಡ ಶಾಲೆಗಳಿಗೆ ಕಟ್ಟಡ, ವಾಚನಾಲಯ, ಆಟದ ಮೈದಾನ ಸೇರಿದಂತೆ ಇತರ ಮೂಲಸೌಕರ್ಯಗಳನ್ನು ಒದಗಿಸುವ ಹಾಗೂ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿಯ ಕ್ರಮಕ್ಕೆ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು. ಕನ್ನಡೇತರ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ಕಡ್ಡಾಯವಾಗಿ ನೇಮಕ ಮಾಡಬೇಕು

3) ಕನ್ನಡ ಅನ್ನದ ಭಾಷೆಯಾಗಲು ಕನ್ನಡಿಗರ ಉದ್ಯೋಗಕ್ಕೆ ತಡೆಯಾಗಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸರ್ಕಾರ ಸಮರ್ಪಕವಾಗಿ ಎದುರಿಸಬೇಕು. ಸರೋಜಿನಿ ಮಹಿಷಿ ವರದಿಯನ್ನು ಶಾಸನಬದ್ಧಗೊಳಿಸಿ ಅನುಷ್ಠಾನಗೊಳಿಸಬೇಕು

4) ದಾವಣಗೆರೆಯಲ್ಲಿ ನಡೆಯಬೇಕಿರುವ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದೊಂದಿಗೆ ಅತಿ ಶೀಘ್ರದಲ್ಲಿ ನಡೆಸಬೇಕು

5) ಕರ್ನಾಟಕ ಸರ್ಕಾರವು ರಾಷ್ಟ್ರಕವಿಯನ್ನು ಅತಿ ಶೀಘ್ರವಾಗಿ ಘೋಷಿಸಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.