ಶುಕ್ರವಾರ, ಆಗಸ್ಟ್ 19, 2022
27 °C

ಜಿ.ಎಸ್. ಆಮೂರಗೆ ‘ನೃಪತುಂಗ ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಮರ್ಶಕ ಡಾ.ಜಿ.ಎಸ್. ಆಮೂರ ಅವರು 2020ನೇ ಸಾಲಿನ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಮನು ಬಳಿಗಾರ್‌ ಅಧ್ಯಕ್ಷತೆಯ ಸಮಿತಿಯು ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 7 ಲಕ್ಷ ನಗದು ಒಳಗೊಂ ಡಿದೆ. ಪ್ರಶಸ್ತಿಯನ್ನು ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆಯು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿದೆ.

45 ವರ್ಷದೊಳಗಿನ ಸಾಹಿತಿಗಳಿಗೆ ನೀಡುವ ‘ಮಯೂರವರ್ಮ ಸಾಹಿತ್ಯ ಪ್ರಶಸ್ತಿ’ಗೆ ಡಾ. ಧನಂಜಯ ಕುಂಬ್ಳೆ, ಅಕ್ಷತಾ ಕೃಷ್ಣಮೂರ್ತಿ, ಡಾ. ಸಂತೋಷ ಹಾನಗಲ್ಲ, ವನಿತಾ ಎಸ್. ಶೇಟ್ ಹಾಗೂ ಆರ್. ಪ್ರಭಾಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ₹25 ಸಾವಿರ ನಗದು ಒಳಗೊಂಡಿದೆ.

ಕವಿ ಜರಗನಹಳ್ಳಿ ಶಿವಶಂಕರ್, ವಿಮರ್ಶಕ ಎಸ್.ಆರ್. ವಿಜಯಶಂಕರ, ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣ ಅಧಿಕಾರಿ ಮಥುರಾ ರಾಡ್ರಿಕ್ಸ್, ಕೆಎಸ್‌ಆರ್‌ಟಿಸಿ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವ.ಚ.ಚನ್ನೇಗೌಡ ಅವರು ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು