ಗಾಯಕಿ ವಾಣಿ ಜಯರಾಮ್ ನಿಧನ: ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಸಂತಾಪ

ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ವಾಣಿ ಜಯರಾಮ್ (78) ಅವರು ಶನಿವಾರ ನಿಧನರಾಗಿದ್ದಾರೆ.
ವಾಣಿ ಜಯರಾಮ್ ಅವರ ನಿಧನಕ್ಕೆ ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕೃಷ್ಣ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.
‘ಕನ್ನಡ ಸೇರಿದಂತೆ ಇತರ 19 ಭಾಷೆಗಳಲ್ಲಿ ತಮ್ಮ ಗಾನಸುಧೆಯನ್ನು ಹರಿಸಿದ್ದ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಮ್ ಅವರು ಇಂದು ನಮ್ಮನ್ನು ಅಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಸಾಹಿತ್ಯಕ್ಕೆ ಭಾವ ತುಂಬಿ ಅವರು ಅನೇಕ ಅದ್ಭುತ ಗೀತೆಗಳನ್ನು ಹಾಡಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಓಂ ಶಾಂತಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಕನ್ನಡ ಸೇರಿದಂತೆ ಇತರ 19 ಭಾಷೆಗಳಲ್ಲಿ ತಮ್ಮ ಗಾನಸುಧೆಯನ್ನು ಹರಿಸಿದ್ದ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ಅವರು ಇಂದು ನಮ್ಮನ್ನು ಅಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಸಾಹಿತ್ಯಕ್ಕೆ ಭಾವ ತುಂಬಿ ಅವರು ಅನೇಕ ಅದ್ಭುತ ಗೀತೆಗಳನ್ನು ಹಾಡಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಓಂ ಶಾಂತಿಃ pic.twitter.com/XWdjo7SyFa
— Basavaraj S Bommai (@BSBommai) February 4, 2023
‘ಖ್ಯಾತ ಗಾಯಕಿ ಹಾಗೂ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ವಾಣಿ ಜಯರಾಮ್ ಅಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಓಂ ಶಾಂತಿ’ ಎಂದು ಕೇಂದ್ರ ಸಚಿವ ಜಿ.ಕೃಷ್ಣ ರೆಡ್ಡಿ ಟ್ವೀಟ್ ಮಾಡಿದ್ದಾರೆ.
Saddened by the demise of legendary singer and Padma Bhushan Awardee Smt. Vani Jairam.
My deepest condolences to her family members and admirers in this hour of grief.
May her soul attain sadgati.
Om Shanti🙏🏼 pic.twitter.com/GHZeaVTeQ7
— G Kishan Reddy (@kishanreddybjp) February 4, 2023
‘ವಾಣಿ ಜಯರಾಮ್ ಅಮ್ಮ ಇನ್ನಿಲ್ಲ ಎಂಬ ಕಟುವಾದ ಸತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅಮ್ಮಾ... ನಾವು ನಿಮ್ಮನ್ನು ಕಳೆದುಕೊಳ್ಳುತ್ತೇವೆ. ಕಳೆದ ಆಗಸ್ಟ್‌ನಲ್ಲಿ ಅವರನ್ನು ಭೇಟಿಯಾಗಿದ್ದೆ. ಇಂದು ಅವರು ನಮ್ಮೊಂದಿಗಿಲ್ಲ ಎಂದು ತಿಳಿದು ನನಗೆ ಆಘಾತವಾಗಿದೆ ಎಂದು ಸಂಗೀತ ಸಂಯೋಜಕ ಡಿ.ಇಮ್ಮನ್ ಟ್ವೀಟ್ ಮಾಡಿದ್ದಾರೆ.
Can’t accept the hard hitting reality that Legendary Singer Vani Jairam Amma is no more. We miss you Amma. Met her and recorded for my upcoming film “Malai” last August. And I’m shocked to know that she’s no more today.
My prayers.
May Her soul Rest in Peace.
-D.Imman pic.twitter.com/Dy3YdXP4Yn— D.IMMAN (@immancomposer) February 4, 2023
ಚೆನ್ನೈನ ನುಂಗಂಬಾಕ್ಕಂನ ಹ್ಯಾಡೋಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ವಾಣಿ ಜಯರಾಮ್ ಅವರು ಶವವಾಗಿ ಪತ್ತೆಯಾಗಿದ್ದು, ಅವರ ಹಣೆಯ ಮೇಲೆ ಗಾಯವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.
ವಾಣಿ ಅವರು ಸಿನಿಮಾ ಹಿನ್ನೆಲೆ ಗಾಯಕಿಯಾಗಿದ್ದು, ಕನ್ನಡ, ತಮಿಳು ಹಿಂದಿ, ಉರ್ದು, ಮರಾಠಿ, ಭೋಜ್‌ಪುರಿ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದಾರೆ.
ಓದಿ... ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಖ್ಯಾತ ಗಾಯಕಿ ವಾಣಿ ಜಯರಾಮ್ ಇನ್ನಿಲ್ಲ
ಭಾರತೀಯ ಸಿನಿಮಾ ರಂಗದ ಜನಪ್ರಿಯ ಗಾಯಕಿ, ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತೆ, ಅನೇಕ ಭಾಷೆಗಳಲ್ಲಿ ಹಾಡಿರುವ ಶ್ರೀಮತಿ ವಾಣಿ ಜಯರಾಂ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ.
ಓಂ ಶಾಂತಿಃ pic.twitter.com/0uJS3XSGYL
— BJP Karnataka (@BJP4Karnataka) February 4, 2023
ಸಿನಿಮಾ ರಂಗದ ತಮ್ಮ ಗಾಯನದ ಮೂಲಕ ಮನೆಮಾತಾಗಿದ್ದ ಸುಪ್ರಸಿದ್ದ ಗಾಯಕಿ ಶ್ರೀಮತಿ ವಾಣಿ ಜಯರಾಮ್ ಅವರು ನಿಧನರಾಗಿದ್ದು ಅವರಿಗೆ ನಮ್ಮ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸುತ್ತೇವೆ. pic.twitter.com/fBTRa0ebf9
— Karnataka Congress (@INCKarnataka) February 4, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.