ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ವೀರಪ್ಪ ಮೊಯಿಲಿ

Last Updated 26 ಏಪ್ರಿಲ್ 2018, 8:22 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧಪಡಿಸಿರುವ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಬಿಡುಗಡೆ ಮಾಡುವರು ಎಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯಿಲಿ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ' ಶುಕ್ರವಾರ ಬೆಳಿಗ್ಗೆ 9.45ಕ್ಕೆ ಮಂಗಳೂರಿನ ಟಿ.ಎಂ.ಎ. ಪೈ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡುವರು. ನಂತರ ಈ ಕುರಿತು ಸಭಿಕರೊಂದಿಗೆ ಸಂವಾದ ನಡೆಸುವರು' ಎಂದರು.

ರಾಜ್ಯ ಮಟ್ಟದಲ್ಲಿ ಒಂದು, ನಾಲ್ಕು ಕಂದಾಯ ವಿಭಾಗಗಳಿಗೆ ತಲಾ ಒಂದು ಮತ್ತು 30 ಜಿಲ್ಲೆಗಳಿಗೆ ಒಂದೊಂದು ಪ್ರತ್ಯೇಕ ಪ್ರಣಾಳಿಕೆಗಳನ್ನು ರೂಪಿಸಲಾಗಿದೆ. ಎಲ್ಲ ವರ್ಗದ ಮತ್ತು ಕ್ಷೇತ್ರಗಳ ಪ್ರತಿನಿಧಿಗಳ ಜೊತೆ ಚರ್ಚಿಸಿ ಪ್ರಣಾಳಿಕೆ ರೂಪಿಸಲಾಗಿದೆ ಎಂದರು.

ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಬಳಿಕ ಬಂಟ್ವಾಳಕ್ಕೆ ತೆರಳುವರು. ಅಲ್ಲಿಂದ ಧರ್ಮಸ್ಥಳಕ್ಕೆ ಹೋಗುವರು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT