ಬೆಂಗಳೂರು: ಖ್ಯಾತ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ವಾಣಿ ಜಯರಾಮ್ (78) ಅವರು ಶನಿವಾರ ನಿಧನರಾಗಿದ್ದಾರೆ.

ಚೆನ್ನೈನ ನುಂಗಂಬಾಕ್ಕಂನ ಹ್ಯಾಡೋಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಅವರ ಶರೀರ ಪತ್ತೆಯಾಗಿದೆ. ಅವರ ಹಣೆಯ ಮೇಲೆ ಗಾಯವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ವಾಣಿ ಅವರು ಸಿನಿಮಾ ಹಿನ್ನೆಲೆ ಗಾಯಕಿಯಾಗಿದ್ದು, ಕನ್ನಡ, ತಮಿಳು ಹಿಂದಿ, ಉರ್ದು, ಮರಾಠಿ, ಭೋಜ್‌ಪುರಿ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದಾರೆ.

ಕಲೆ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವಾಣಿ ಜಯರಾಮ್ ಅವರಿಗೆ ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿವೆ. ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ, ಕೇರಳ, ಗುಜರಾತ್ ಮತ್ತು ಒಡಿಶಾದಿಂದ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ವೃತ್ತಿಪರ ಗಾಯಕಿಯಾಗಿ 50 ವರ್ಷಗಳನ್ನು ಪೂರೈಸಿರುವ ವಾಣಿ ಜಯರಾಮ್, ಹತ್ತು ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ, ಆರ್.ಡಿ. ಬರ್ಮನ್, ಕೆ.ವಿ. ಮಹದೇವನ್, ಪಿ. ನಯ್ಯರ್ ಮತ್ತು ಮದನ್ ಮೋಹನ್ ಸೇರಿದಂತೆ ಇತರ ಪ್ರಸಿದ್ಧ ಸಂಯೋಜಕರೊಂದಿಗೆ ಕೆಲಸ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.