ಸೋಮವಾರ, ಮಾರ್ಚ್ 30, 2020
19 °C
ಸಿಎಎ ಕುರಿತು ಸಿಎಂಆರ್ ತಾಂತ್ರಿಕ ಸಂಸ್ಥೆಯಲ್ಲಿ ಚರ್ಚೆ

‘ಕಿರುಕುಳ ಅನುಭವಿಸಿ ಬಂದವರಿಗೆ ಪೌರತ್ವ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವೈಟ್‌ಫೀಲ್ಡ್‌: ‘ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಧರ್ಮದ ಆಧಾರದ ಮೇಲೆ ಕಿರುಕುಳ ಅನುಭವಿಸಿ ಭಾರತಕ್ಕೆ ವಲಸೆ ಬಂದು, ಆರು ವರ್ಷಕ್ಕೂ ಮೇಲ್ಪಟ್ಟು ನಮ್ಮ ದೇಶದಲ್ಲಿಯೇ ವಾಸವಾಗಿದ್ದರೆ ಅವರು ಭಾರತದ ಪೌರತ್ವ ಪಡೆಯಬಹುದು’ ಎಂದು ಮಧ್ಯಪ್ರದೇಶದ ರಾಜ್ಯಸಭಾ ಸದಸ್ಯ ಸ್ವಪ್ನದಾಸ್ ಗುಪ್ತ ಹೇಳಿದರು. 

ವೈಟ್‌ಫೀಲ್ಡ್‌ ಸಮೀಪದ ಕುಂದಲಹಳ್ಳಿಯ ಸಿಎಂಆರ್ ತಾಂತ್ರಿಕ ಸಂಸ್ಥೆ ಆವರಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಹಮ್ಮಿಕೊಂಡಿದ್ದ ಚರ್ಚೆಯಲ್ಲಿ ಮಾತನಾಡಿದ ಅವರು, ‘ಸಾರ್ವಜನಿಕರಿಗೆ ಈ ಕಾಯ್ದೆ ಬಗ್ಗೆ ಗೊಂದಲವಿದೆ. ಸ್ಥಳೀಯ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯ ಪ್ರತಿಯೊಬ್ಬರೂ ಮಾಡಬೇಕು’ ಎಂದರು.

ಜಮ್ಮು ಕಾಶ್ಮೀರದ ಹಿರಿಯ ಪತ್ರಕರ್ತ ರಮೇಶ್ ಕುಮಾರ್ ಮೊಟ್ಟೊ, ‘ಕಾನೂನುಬದ್ಧ ಪಾಸ್‌ಪೋರ್ಟ್ ಅಥವಾ ಸೂಕ್ತ ದಾಖಲೆ ಇಲ್ಲದೆ ಭಾರತಕ್ಕೆ ನುಸುಳಿದವರು ಭಾರತದ ಸಂವಿಧಾನದ ಪ್ರಕಾರ ಅಕ್ರಮ ವಲಸಿಗರಾಗಿದ್ದಾರೆ. ಪೌರತ್ವ ಕಾಯ್ದೆಯನ್ನು ಸೂಕ್ತವಾಗಿ ಯಾರಿಗೂ ತೊಂದರೆ ಆಗದಂತೆ ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ’ ಎಂದರು. 

ಶಾಸಕ ಅರವಿಂದ ಲಿಂಬಾವಳಿ, ‘ಮಹಾದೇವಪುರ ಕ್ಷೇತ್ರದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ವಲಸಿಗರನ್ನು ಕಾನೂನು ಮೂಲಕ ಹೊರ ಹಾಕುವ ಕೆಲಸ ಮಾಡುತ್ತಿದ್ದೇವೆ. ಕ್ಷೇತ್ರದ ವಾಸಿಸುತ್ತಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾದಾಗ ಕೆಲವು ಸರ್ಕಾರೇತರ ಸಂಸ್ಥೆಗಳು ನ್ಯಾಯಾಲಯದ ಮೊರೆ ಹೋದವು’ ಎಂದರು. 

‘ಬೆಂಗಳೂರಿನಲ್ಲಿ ಉಗ್ರಗಾಮಿ ಚಟುವಟಿಕೆಗಳನ್ನು ತಡೆಗಟ್ಟಲು ಪ್ರತಿಯೊಬ್ಬರೂ ಸಹಕರಿಸಬೇಕು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು