ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭ್ಯರ್ಥಿಗಳ ಆಯ್ಕೆಗೆ ಸರ್ವೆ ನಡೆದಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Last Updated 9 ಫೆಬ್ರುವರಿ 2018, 8:39 IST
ಅಕ್ಷರ ಗಾತ್ರ

ದಾವಣಗೆರೆ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಪಕ್ಷ ಸರ್ವೆ ನಡೆಸಿದೆ. ಅಲ್ಲದೇ ಕ್ಷೇತ್ರಗಳಿಗೆ ವೀಕ್ಷಕರೂ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಹರಿಹರ ತಾಲ್ಲೂಕಿನ ಬೆಳ್ಳೂಡಿಯಲ್ಲಿ ಹಮ್ಮಿಕೊಂಡಿರು ಕನಕ ಗುರುಪೀಠದ ರಜತ ಮಹೋತ್ಸವದಲ್ಲಿ ಶುಕ್ರವಾರ ಪಾಲ್ಗೊಳ್ಳುವ ಮೊದಲು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಬಿಸಿಯೂಟ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಇಲಾಖೆ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಮನವಿ ಆಲಿಸುವರು ಎಂದರು.  ಜಾತಿ ಜನಗಣತಿ ವರದಿಯನ್ನು ಆಯೋಗ ಸರ್ಕಾರಕ್ಕೆ ಸಲ್ಲಿಸಿದ ತಕ್ಷಣ ಬಿಡುಗಡೆ ಮಾಡಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಯಾವುದೇ ಮಠ, ದೇವಸ್ಥಾನಗಳನ್ನು ವಶಕ್ಕೆ ಪಡೆಯುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, 2007ರಲ್ಲಿದ್ದಂತಹ ಸಮ್ಮಿಶ್ರ ಸರ್ಕಾರ ಹೊರಡಿಸಿದ ಪ್ರಕಟಣೆ ಅಷ್ಟೇ ನಾವು ಹೊರಡಿಸಿದ್ದು, ಇದು ಪ್ರಸ್ತಾವನೆ ಅಲ್ಲ. ಮಾಧ್ಯಮಗಳೂ ಇದನ್ನು ತಪ್ಪಾಗಿ ಅರ್ಥೈಸಿಕೊಂಡಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಎಡಪಕ್ಷಗಳ ಜೊತೆಗಿನ ಚುನಾವಣೆ ಹೊಂದಾಣಿಕೆ ಕುರಿತಂತೆ ಸೋನಿಯಾ ಗಾಂಧಿ ಹೇಳಿಕೆ ರಾಷ್ಟ್ರ ಮಟ್ಟಕ್ಕೆ ಸೀಮಿತ. ಕರ್ನಾಟಕಕ್ಕೆ ಅನ್ವಯಿಸುವುದಿಲ್ಲ. ಬಿಎಸ್ಪಿ ಜತೆ ಜೆಡಿಎಸ್ ಹೊಂದಾಣಿಕೆ ಕಾಂಗ್ರೆಸ್ ಮೇಲೆ ಯಾವುದೇ ಪರಿಣಾಮ ಬೀರದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT