ಕಾಶ್ಮೀರ ಬಂದ್‌: ಜನಜೀವನ ಅಸ್ತವ್ಯಸ್ತ

7

ಕಾಶ್ಮೀರ ಬಂದ್‌: ಜನಜೀವನ ಅಸ್ತವ್ಯಸ್ತ

Published:
Updated:

ಶ್ರೀನಗರ: ‍ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಲ್ಲಿರುವ ಕಲಂ 35–ಎ ಸಿಂಧುತ್ವ ಪ್ರಶ್ನಿಸಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಮುಂದಾಗಿರುವುದನ್ನು ಪ್ರತಿಭಟಿಸಿ ಪ್ರತ್ಯೇಕವಾದಿಗಳು ಕರೆ ನೀಡಿದ್ದ ಎರಡು ದಿನಗಳ ಬಂದ್‌ಗೆ ಭಾನುವಾರ ಕಾಶ್ಮೀರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಅಂಗಡಿಗಳು ಬಾಗಿಲು ಮುಚ್ಚಿದ್ದವು. ಆದರೆ ಎಲ್ಲೂ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಂಟಿ ಪ್ರತಿರೋಧ ನಾಯಕತ್ವ (ಜೆಆರ್‌ಎಲ್) ಸಂಘಟನೆಯು ಬಂದ್‌ಗೆ ಕರೆ ನೀಡಿತ್ತು. ವಿವಿಧ ಸಂಘಟನೆಗಳು ಇದಕ್ಕೆ ಬೆಂಬಲ ಸೂಚಿಸಿವೆ.

ಕಲಂ 35–ಎ ಪ್ರಕಾರ ಹೊರಗಿನವರು ಜಮ್ಮ ಮತ್ತು ಕಾಶ್ಮೀರದಲ್ಲಿ ಯಾವುದೇ ಸ್ಥಿರ ಆಸ್ತಿಯನ್ನು ಖರೀದಿ ಮಾಡುವಂತಿಲ್ಲ.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !