ಶುಕ್ರವಾರ, ಏಪ್ರಿಲ್ 16, 2021
31 °C

ಅಂಕ ಗಳಿಕೆ ಒತ್ತಡ:ವಿದ್ಯಾರ್ಥಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸನಗರ:  ಅಂಕ ಗಳಿಕೆಯ ಒತ್ತಡದಿಂದ ಮನನೊಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ತಾಲ್ಲೂಕಿನ ಸೋನಲೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರಾಮಕೃಷ್ಣ ವಿದ್ಯಾಸಂಸ್ಥೆಯ 9ನೇ ತರಗತಿಯ ವಿದ್ಯಾರ್ಥಿ ಆದರ್ಶ (15) ವಿಷ ಸೇವಿಸಿ ಮೃತಪಟ್ಟಿದ್ದಾನೆ. ಶಾಲಾ ಅಂಕಪಟ್ಟಿಯ ಪ್ರಗತಿ ವರದಿಯಲ್ಲಿ ಕಡಿಮೆ ಅಂಕ ಬಂದಿದೆ ಎಂಬ ಕಾರಣದಿಂದ ಸಹಿ ಹಾಕಲು ಆತನ ತಾಯಿ  ನಿರಾಕರಿಸಿದರು ಎನ್ನಲಾಗಿದೆ. ಇದರಿಂದ ಒತ್ತಡಕ್ಕೆ ಒಳಗಾದ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.