ಅಂಗಡಿ ತೆರೆಸಿದ ಜೆಡಿಎಸ್ ಕಾರ್ಯಕರ್ತರ ಬಂಧನ

7

ಅಂಗಡಿ ತೆರೆಸಿದ ಜೆಡಿಎಸ್ ಕಾರ್ಯಕರ್ತರ ಬಂಧನ

Published:
Updated:

ಬೀದರ್: ‘ಕರ್ನಾಟಕ ಬಂದ್’ಗೆ ವಿರೋಧ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಮುಚ್ಚಿದ್ದ ಅಂಗಡಿಗಳನ್ನು ತೆರೆಸಲು ಯತ್ನಿಸಿದರು. ಬಿಜೆಪಿ ಕಾರ್ಯಕರ್ತರು ಬೈಕ್ ಮೇಲೆ ಸಂಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರೆ ಜೆಡಿಎಸ್ ಕಾರ್ಯಕರ್ತರು ನಗರದ ಹಳೆಯ ಭಾಗದಲ್ಲಿ ಕೆಲ ಅಂಗಡಿಗಳನ್ನು ಮತ್ತೆ ತೆರೆಸುವುದಕ್ಕೆ ಪ್ರಯತ್ನಿಸಿದರು.ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸೂಚನೆ ಅರಿತ ಟೌನ್ ಠಾಣೆಯ ಪೊಲೀಸರು ಜೆಡಿಎಸ್ ಮುಖಂಡರಾದ ಬಾಬುರಾವ ಮಲ್ಕಾಪುರ, ಮಾರುತಿ ಬೌದ್ಧೆ, ಗಾಲೇಬ್ ಹಾಸ್ಮಿ ಸೇರಿದಂತೆ ಒಟ್ಟು 13 ಜನ ಕಾರ್ಯಕರ್ತರನ್ನು ಬಂಧಿಸಿ ಅನಂತರ ಬಿಡುಗಡೆ ಮಾಡಿದರು.ಬಂದೋಬಸ್ತ್: ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದ ವಿವಿಧೆಡೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಬಂದ್ ವೇಳೆ ಅಹಿತಕರ ಘಟನೆ ನಡೆದ ಬಗ್ಗೆ ವರದಿ ಆಗಿಲ್ಲ.

 

  

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry