ಶನಿವಾರ, ಜನವರಿ 18, 2020
19 °C

ಅಂಗನವಾಡಿ ಕಾರ್ಯಕರ್ತೆಯರಿಗೆ ಸವಲತ್ತು ಕಲ್ಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರೀಸಾವೆ: ಅಂಗನವಾಡಿ ಶಿಕ್ಷಕಿಯ ರಿಗೆ ಸರ್ಕಾರ ಹೆಚ್ಚಿನ ಸವಲತ್ತು ನೀಡಬೇಕು ಎಂದು ಜಿಲ್ಲಾ ಪಂಚಾ ಯಿತಿ ಸದಸ್ಯೆ ಡಿ.ಜಿ. ಅಂಬಿಕಾರಾಮಕೃಷ್ಣ ಹೇಳಿದರು.ಪಟ್ಟಣದ ಅಂಗನವಾಡಿ ಕೇಂದ್ರ ದಲ್ಲಿ ಶುಕ್ರವಾರ ನಡೆದ ಬಾಲ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಂಗನ ವಾಡಿ ಕಾರ್ಯಕರ್ತೆಯರನ್ನು ಬಳಸಿಕೊಂಡು ಜನರಿಗೆ ಸರ್ಕಾರದ ಯೋಜನೆಗಳ ಮಾಹಿತಿ ತಲುಪಿಸುತ್ತಿದೆ ಎಂದರು.  ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎಸ್.ಶ್ರೀಧರ್ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ  ಪ್ಲೇ ಹೋಮಗಳಿಗಿಂತ ಉತ್ತಮ ವಾದ ಸವಲತ್ತುಗಳನ್ನು ಸರ್ಕಾರ ಕಲ್ಪಿಸಿದೆ ಎಂದರು.  ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಜಿ.ಮಂಜುನಾಥ ಮಾತನಾಡಿದರು.  ಅಂಗನವಾಡಿ ನಿವೃತ್ತ ಸಹಾಯಕಿ ಹುಚ್ಚಮ್ಮಅವರನ್ನು ಸನ್ಮಾನಿಸ ಲಾಯಿತು. ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ಉಪಾಧ್ಯಕ್ಷೆ ಮೀನಾಕ್ಷಿ ಗಂಗಾಧರ್, ತಾಲ್ಲೂಕು ಉಪ ಶಿಶು ಅಭಿವೃದ್ಧಿ ಅಧಿಕಾರಿ ಚಂದ್ರರಾಜಅರಸ್, ಮೇಲ್ವಿಚಾರಕಿ ಜಯಲಕ್ಷ್ಮಿಇದ್ದರು. ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್ ಸ್ವಾಗತಿಸಿದರು.  

ಪ್ರತಿಕ್ರಿಯಿಸಿ (+)