ಕೋಲಾರ: `ಅಪೌಷ್ಠಿಕತೆಯಿಂದ ಬಳಲುತ್ತಿರುವ ಗ್ರಾಮೀಣ ಗರ್ಭಿಣಿಯರು ಮತ್ತು ಮಕ್ಕಳ ಅಕಾಲಿಕ ಮರಣ ತಡೆಯಲು ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು~ ಎಂದು ಸುಪ್ರಿಂಕೋರ್ಟ್ ಸೂಚಿಸಿದ್ದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯವಹಿಸಿವೆ ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ ನುಡಿದರು.

ನಗರದ ಅಂಜುಮನ್ ಶಾದಿ ಮಹಲ್ನಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ನೌಕರರ ಸೇವೆಯನ್ನು ಖಾಯಂಗೊಳಿಸಬೇಕು, ಗೌರವಧನ ಹೆಚ್ಚಿಸಬೇಕು ಹಾಗೂ ಕನಿಷ್ಠ ಕೂಲಿ ನಿಗದಿ ಪಡಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು ಎಂದು ನುಡಿದರು.

ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈಶ್ವರಮ್ಮ, ಮುನಿರಾಜಮ್ಮ, ನಾಗರತ್ನಮ್ಮ ಉಪಸ್ಥಿತರಿದ್ದರು.

ರಾಜ್ಯ ಮಟ್ಟಕ್ಕೆ ಆಯ್ಕೆ
ತಾಲ್ಲೂಕಿನ ಕ್ಯಾಲನೂರು ಗ್ರಾಮದ ಜ್ಞಾನದೀಪಿಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕೊಕ್ಕೊ ಪಂದ್ಯದಲ್ಲಿ ವಿಜೇತರಾಗಿ ಸತತ ಮೂರನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ವಿಜೇತರಾದವರ ವಿವರ: ಭವ್ಯಶ್ರೀ- 100ಮೀ ಓಟ (ದ್ವಿತೀಯ), ಹರ್ಷ- 80ಮೀ ಓಟ (ತೃತೀಯ), ವಿಶ್ವನಾಥ್- 200 ಮೀಟರ್ ಓಟ (ತೃತೀಯ).

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.