ಗುರುವಾರ , ಏಪ್ರಿಲ್ 22, 2021
28 °C

ಅಂಗನವಾಡಿ ನೌಕರರ ಧರಣಿ 2ನೇ ದಿನಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಸ್ವಾವಲಂಬನೆ ಪಿಂಚಣಿ ಯೋಜನೆ ವಿರೋಧಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದವರು ಇಲ್ಲಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ, ಸೇವಾ ಕಾಯಮಾತಿ, ಶಾಶ್ವತ ಪಿಂಚಣಿ ಸೌಲಭ್ಯ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಹಲವು ಬಾರಿ ಮನವಿ ಮಾಡಿದೆ. ಆದರೆ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದರು.ಶಾಸಕ ಅಪ್ಪು ಪಟ್ಟಣಶೆಟ್ಟಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ, ಸದಸ್ಯರಾದ ಗುರನಗೌಡ ಪಾಟೀಲ, ಚಂದ್ರಕಾಂತ ಕೋಳಿ, ಬಿ.ಡಿ. ಪಾಟೀಲ, ಜಿ.ಪಂ. ಸಿಇಓ ಎ.ಎನ್. ಪಾಟೀಲ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತರುವ ಭರವಸೆ ನೀಡಿದರು.ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭೀಮಶಿ ಕಲಾದಗಿ, ಅಣ್ಣಾರಾಯ ಈಳಗೇರ, ವಿ.ಎಂ. ಸೊನ್ನದ, ಜನವಾದಿ ಮಹಿಳಾ ಸಂಘದ ಸುರೇಖಾ ರಜಪೂತ, ಅಶೋಕ ಗಲಗಲಿ, ಎಸ್.ಐ. ಗದ್ದಗಿಮಠ, ಸಿ.ಸಿ. ಕುಲಕರ್ಣಿ, ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಶೇಷರಾವ ಮಾನೆ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.