ಶನಿವಾರ, ಮೇ 15, 2021
24 °C

ಅಂಗನವಾಡಿ ವಿಲೀನಕ್ಕೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಅಂಗನವಾಡಿ ಕೇಂದ್ರಗಳ ವಿಲೀನ ಪ್ರಕ್ರಿಯೆ ಕೈಬಿಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು)ದ ಜಿಲ್ಲಾ ಘಟಕ ಒತ್ತಾಯಿಸಿದೆ.ಈ ಕುರಿತು ಈಚೆಗೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದ ಘಟಕದ ಪದಾಧಿಕಾರಿಗಳು, ಕೂಡಲೇ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.ಮಕ್ಕಳ ಹಾಜರಾತಿ ಕೊರತೆಯ ನೆಪದಲ್ಲಿ ಅಂಗನವಾಡಿ ಗಳನ್ನು ವಿಲೀನ ಗೊಳಿಸಬಾರದು. ನೌಕರರಿಗೆ ಪಿಂಚಣಿ ನೀಡುವ ಸಂಬಂಧ 2011ರಲ್ಲಿಯೇ ತೀರ್ಮಾನ ಕೈಗೊಳ್ಳ ಲಾಗಿದೆ. ಇಂದಿಗೂ ಸೌಲಭ್ಯ ಕಲ್ಪಿಸಿಲ್ಲ. ಕೂಡಲೇ, ಪಿಂಚಣಿ ಸೌಲಭ್ಯ ಕಲ್ಪಿಸಿ ಕೊಡಬೇಕು. ಅಂಗನವಾಡಿ ಕೇಂದ್ರದ 3ರಿಂದ 6 ವರ್ಷದ ಮಕ್ಕಳನ್ನು ಪೂರ್ವ ಪ್ರಾಥಮಿಕ ಶಿಕ್ಷಣಕ್ಕಾಗಿ ಶಿಕ್ಷಣ ಇಲಾ ಖೆಯ ವ್ಯಾಪ್ತಿ ನೀಡಲು ನಿರ್ಧರಿಸ ಲಾಗಿದೆ. ಈ ನೀತಿ ಕೈಬಿಡಬೇಕು ಎಂದು ಒತ್ತಾಯಿಸಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ನೌಕರರಿಗೆ ಗೌರವಧನ ನೀಡಲಾಗು ತ್ತಿದೆ. ಒಟ್ಟಿಗೆ ನೀಡುವಂತಹ ವ್ಯವಸ್ಥೆ ಯಾಗಬೇಕು. ಮಿನಿ ಅಂಗನವಾಡಿ ಕೇಂದ್ರಗಳನ್ನು ಸಾಧಾರಣ ಅಂಗನವಾಡಿ ಕೇಂದ್ರಗಳಾಗಿ ಪರಿವರ್ತಿಸಬೇಕು. ಖಾಲಿ ಇರುವ ಕೇಂದ್ರಗಳಿಗೆ ಮೊದಲು ವರ್ಗಾ ವಣೆ ಮಾಡುವುದು ಉತ್ತಮ. ನಂತರ ಉಳಿದ ಕೇಂದ್ರಗಳಿಗೆ ಭರ್ತಿ ಪ್ರಕ್ರಿಯೆ ನಡೆಸಬೇಕು ಎಂದು ಆಗ್ರಹಿಸಿದರು.ಅಂಗನವಾಡಿ ನೌಕರರು ಅಕಾಲಿಕ ಮರಣ ಹೊಂದಿದರೆ ಅವರ ಕುಟುಂಬದ ಸದಸ್ಯರಿಗೆ ಕೆಲಸ ನೀಡುವ ನೀತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಕೆ. ಸುಜಾತಾ, ಕಾರ್ಯದರ್ಶಿ ಎಸ್. ಪಾರ್ವತಮ್ಮ, ನಾಗವೇಣಿ, ಪುಟ್ಟಬಸಮ್ಮ, ಸುಮಿತ್ರಾ, ರೋಸ್‌ಕುಮಾರಿ, ಎ. ನಾಗಮಣಿ, ಸೋಮೇಶ್ವರಿ, ಕಾಂಚನಾ, ಜಯಮಾಲಾ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.