ಶನಿವಾರ, ಜನವರಿ 25, 2020
28 °C

ಅಂಗನವಾಡಿ ಸಿಬ್ಬಂದಿಗೆ ಬಿಪಿಎಲ್ ಕಾರ್ಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುವರ್ಣಸೌಧ (ಬೆಳಗಾವಿ): ರಾಜ್ಯದಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು ಎಂದು ಆಹಾರ ಸಚಿವ ದಿನೇಶ ಗುಂಡೂರಾವ್ ತಿಳಿಸಿದ್ದಾರೆ. ಶಾಸಕ ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ವಿಧಾನಸಭೆಯಲ್ಲಿ ಗುರುವಾರ ಉತ್ತರ ನೀಡಿದ ಅವರು, ಬಿಪಿಎಲ್ ಕಾರ್ಡ್ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಅರ್ಹರು ಎಂದರು.ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಿ ನೌಕರರು ಎಂಬ ಕಾರಣಕ್ಕಾಗಿ ಅವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುತ್ತಿಲ್ಲ ಎಂದು ಸುನೀಲ್ ಕುಮಾರ್ ಹೇಳಿದರು. ಇದಕ್ಕೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರಿ ನೌಕರರಲ್ಲ. ಅವರಿಗೆ ಕೇವಲ ಗೌರವಧನ ನೀಡಲಾಗುತ್ತದೆ ಎಂದರು.ಪಡಿತರ ಚೀಟಿ: ಆನ್‌ಲೈನ್‌ನಲ್ಲಿ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಕೆಲವು ಸಮಸ್ಯೆಗಳಿದ್ದು ಅವುಗಳನ್ನು ಬಗೆಹರಿಸಲಾಗುವುದು. ರಾಜ್ಯದಲ್ಲಿ ಹೊಸದಾಗಿ ಪಡಿತರ ಚೀಟಿಗಾಗಿ ೩೨ ಲಕ್ಷ ಅರ್ಜಿಗಳು ಬಂದಿದ್ದು ಈಗಾಗಲೇ ೧೪ ಲಕ್ಷ ಅರ್ಜಿ ವಿಲೇವಾರಿ ಮಾಡಲಾಗಿದೆ. ಮುಂದಿನ ೨ ತಿಂಗಳಲ್ಲಿ ಅರ್ಹರಿಗೆ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದರು.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ  ನಂತರ ನವೆಂಬರ್ ಅಂತ್ಯದ ಒಳಗೆ ೩ ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಈವರೆಗೆ ಒಟ್ಟು ೨.೨೮ ಲಕ್ಷ ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ನಕಲಿ ಪಡಿತರ ಕಾರ್ಡ್ ನೀಡಿದ ಕೆಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ತುಮಕೂರು, ಚಿಕ್ಕಮಗಳೂರು, ಮೈಸೂರು, ಧಾರವಾಡ, ಗುಲ್ಬರ್ಗ ಜಿಲ್ಲೆಗಳ ನ್ಯಾಯಬೆಲೆ ಅಂಗಡಿಗಳಲ್ಲಿ ಇ–-ಪಡಿತರ ಯಂತ್ರಗಳನ್ನು ಅಳವಡಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿಯೂ  ಈ ವ್ಯವಸ್ಥೆ ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ  ತಿಳಿಸಿದರು.

ಪ್ರತಿಕ್ರಿಯಿಸಿ (+)