ಅಂಗಪಕ್ಷ ಅಭ್ಯರ್ಥಿಗಳಿಗೆ ಅಡ್ಡಿಯಾದ ಚುನಾವಣೆ

7

ಅಂಗಪಕ್ಷ ಅಭ್ಯರ್ಥಿಗಳಿಗೆ ಅಡ್ಡಿಯಾದ ಚುನಾವಣೆ

Published:
Updated:

ನವದೆಹಲಿ (ಪಿಟಿಐ): ಕೆಲವು ರಾಜ್ಯಗಳ ವಿಧಾನಸಭೆಗೆ ಮುಂಬರುವ ಕೆಲ ತಿಂಗಳಲ್ಲಿ ಚುನಾವಣೆ ಇರುವುದರಿಂದ ಯುಪಿಎ ಅಂಗಪಕ್ಷಗಳ ಅಭ್ಯರ್ಥಿಗಳನ್ನು ಸಂಪುಟ ಪುನರ್‌ರಚನೆ ವೇಳೆ ಪರಿಗಣಿಸಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ವಿಧಾನಸಭೆಗೆ ಚುನಾವಣೆ ಹತ್ತಿರ ಇರುವಾಗ ಅಂಗಪಕ್ಷಗಳ ಅಭ್ಯರ್ಥಿಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಸರಿಯಲ್ಲ ಎಂದು ವಾರ್ತಾ ಮತ್ತು ಪ್ರಸಾರ ಸಚಿವೆ ಅಂಬಿಕಾ ಸೋನಿ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಫೆ.21ರಂದು ಆರಂಭವಾಗುವ ಸಂಸತ್ತಿನ ಬಜೆಟ್ ಅಧಿವೇಶನ ಮೇ ವರೆಗೂ ನಡೆಯಲಿದೆ. ಆನಂತರ ಪೂರ್ಣ ಪ್ರಮಾಣದ ಸಂಪುಟ ಪುನರ್‌ರಚನೆ ನಡೆಯಲಿದೆ. ಬುಧವಾರದ ಸಂಪುಟ ಮರುರಚನೆ ಹಲವು ಸಚಿವರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಿದೆ.ಸಚಿವರ ಸಾಮರ್ಥ್ಯ ಪರಿಗಣಿಸಿ ಹೊಣೆಗಾರಿಕೆ ನೀಡಿರುವುದರಿಂದ ಆಡಳಿತದಲ್ಲಿ ಹೊಸ ಚಿಂತನೆ ತರಲು ಇದು ನೆರವಾಗುವುದೆಂದು ವಿಶ್ವಾಸ ವ್ಯಕ್ತಪಡಿಸಿದರು.ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿ ಮುಂದಿನ ಕೆಲ ತಿಂಗಳುಗಳಲ್ಲಿ ಚುನಾವಣೆ ನಡೆಯಬೇಕಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry