ಬುಧವಾರ, ಜನವರಿ 29, 2020
28 °C

ಅಂಗವಿಕಲರ ಕಲ್ಯಾಣಕ್ಕೆ ಬದ್ಧ: ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವದುರ್ಗ: ತಾಲ್ಲೂಕಿನ ಅಂಗವಿಕಲರ ಬೇಡಿಕೆಗಳ ಈಡೇರಿಕೆಗಾಗಿ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎ.ವೆಂಕಟೇಶ ನಾಯಕ ಹೇಳಿದರು.ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಆಸ್ಪತ್ರೆ ದೇವದುರ್ಗ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಅಂಗವಿಲಕರಿಗೆ ಗುರುತಿನ ಚೀಟಿಗೆ ಹೆಸರು ನೋಂದಣಿ ಶಿಬಿರ ಉದ್ಘಾಟಿಸಿ ಮಾತನಾಡಿದರು.ಶಾಸಕರ ಅನುದಾನದಲ್ಲಿ 10 ಲಕ್ಷ ರೂಪಾಯಿ ಅಂಗವಿಕಲರ ಕಲ್ಯಾಣಕ್ಕಾಗಿ ಮೀಸಲಿಡಲಾಗಿದೆ. ಶೀಘ್ರದಲ್ಲಿಯೇ ತಾಲ್ಲೂಕಿನ ಅಂಗವಿಕಲರಿಗೆ ಅವಶ್ಯಕ ವಾಗಿ ಬೇಕಾಗಿರುವ ಮೂಲ ಸೌಕರ್ಯ ಗಳ ಬಗ್ಗೆ ಮಾಹಿತಿ ಪಡೆದು ಮತ್ತು ಸಂಬಂಧಿಸಿದ ಅಂಗವಿಕಲರ ಸಂಘ, ಸಂಸ್ಥೆಗಳ ಮುಖಂಡರೊಂದಿಗೆ ಚರ್ಚಿಸಿ ಕ್ರಿಯಾಯೋಜನೆ ತಯಾರಿಸಲಾ ಗುತ್ತದೆ. ತಾಲ್ಲೂಕಿನ ಇತರ ಇಲಾಖೆಯ ಅಧಿಕಾರಿಗಳು ಸಹಕರಿಸಬೇಕು ಎಂದರು.ಪುರಸಭೆ ಅಧ್ಯಕ್ಷ ಫಕೀರುದ್ದೀನ್‌, ತಹಶೀಲ್ದಾರ್‌ ಬಸಲಿಂಗಪ್ಪ ನೈಕೋಡಿ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸುರೇಶಗೌಡ, ತಾಲ್ಲೂಕು ವೈದ್ಯಾಧಿಕಾರಿ ಡಾ. ಚಂದ್ರಕಾಂತ, ಶಿಶು ಅಭಿವೃದ್ಧಿ ಅಧಿಕಾರಿ ಡಾ.ಮಾಲ್ಮೀಕಿ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಡಿ. ಹುನುಗುಂದ, ಪ್ರತಿಧ್ವನಿ ಅಂಗವಿಕಲರ ಸಂಸ್ಥೆ ಬಾಬು ಮಿಯಾ, ವಕೀಲ ಬಸನಗೌಡ ದೇಸಾಯಿ, ಡಾ.ಸುಭಾಸ ಪಾಟೀಲ ಬ್ಯಾಗವಾಟ್‌, ಡಾ.ಮನೋಹರ ಪತ್ತಾರ್‌, ಡಾ.ವೀರಭದ್ರ ಗದ್ವಾಲ್‌, ಬಸ್ಸಯ್ಯ ಸಾಕೆ, ಭೀಮನಗೌಡ ಇದ್ದರು.

ಪ್ರತಿಕ್ರಿಯಿಸಿ (+)