ಮಂಗಳವಾರ, ಜನವರಿ 28, 2020
23 °C

ಅಂಗವಿಕಲರ ಪ್ರತಿಭೆ ಪ್ರೋತ್ಸಾಹಿಸಿ: ಯಶೋದಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ‘ಅಂಗವಿಕಲರಲ್ಲಿಯೂ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹ ನೀಡಬೇಕಿದೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋದಾ ಪ್ರಭುಸ್ವಾಮಿ ಹೇಳಿದರು.ನಗರದಲ್ಲಿ ಗುರುವಾರ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಅಂಗವಿಕಲರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.ಅಂಗವಿಕಲರ ಬಗ್ಗೆ ಕರುಣೆ ತೋರಿಸುವ ಬದಲು ಅವರಿಗೆ ಸಹಾಯಹಸ್ತ ನೀಡಬೇಕು. ಅವರು ಕೂಡ ನಮ್ಮಂತೆ ಸಬಲರು. ಸಮಾಜದ ಮುಖ್ಯವಾಹಿನಿಗೆ ತರಲು ಎಲ್ಲರೂ ಶ್ರಮಿಸಬೇಕು ಎಂದರು.ನಗರಸಭೆ ಅಧ್ಯಕ್ಷ ಎಸ್. ನಂಜುಂಡಸ್ವಾಮಿ ಮಾತನಾಡಿ, ನಗರಸಭೆಯಿಂದ ಅಂಗವಿಕಲರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆಯಾ ಗಿದೆ. ವಿವಿಧ ಯೋಜನೆಯಡಿ ಅಂಗವಿಕಲರಿಗೆ ಅನುದಾನ ಮೀಸಲಿಡಲಾಗಿದೆ. ಇದನ್ನು ಸಮರ್ಪ ಕವಾಗಿ ಬಳಕೆ ಮಾಡಿಕೊಳ್ಳಲು ಅಂಗವಿಕಲರು ಮುಖ್ಯವಾಹಿನಿ ಬರಬೇಕು ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎಚ್‌. ನರಸಿಂಹಮೂರ್ತಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಪ್ರಭಾರ ಅಧಿಕಾರಿ ಎಚ್.ಕೆ. ರೇವಣೇಶ್, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ ಹಾಜರಿದ್ದರು.

ಪ್ರತಿಕ್ರಿಯಿಸಿ (+)