ಗುರುವಾರ , ಜೂನ್ 17, 2021
27 °C

ಅಂಗವಿಕಲರ ಸಮೀಕ್ಷೆ: ಆಯೋಗ ರಚಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಅಂಗವಿಕಲರ ಸಮೀಕ್ಷೆ ನಡೆಸಲು ಸರ್ಕಾರ ಆಯೋಗವೊಂದನ್ನು ರಚಿಸಬೇಕು~ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಲಕ್ಷ್ಮಿನಾರಾಯಣ ನಾಗವಾರ ಹೇಳಿದರು.ರಾಜ್ಯ ಅಂಧರ ವಿಮೋಚನಾ ವೇದಿಕೆಯು ನಗರದ ನಯನ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಎರಡನೇ ವಾರ್ಷಿಕೋತ್ಸವ ಮತ್ತು `ಅಂತರಾಕ್ಷಿ~ ಮಾಸಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

`ಸರ್ಕಾರ ಆಯೋಗವೊಂದನ್ನು ರಚಿಸಿ ಅಂಗವಿಕಲರ ಬಗ್ಗೆ ಸಮೀಕ್ಷೆ ನಡೆಸಬೇಕು.ನಿಜಕ್ಕೂ ಆ ಸಮುದಾಯದವರಿಗೆ ಸರ್ಕಾರದಿಂದ ಏನು ಸಹಾಯ, ಸಹಕಾರ, ಸೌಲಭ್ಯ ಸಿಗಬೇಕು ಎಂಬ ಬಗ್ಗೆ ವೈಜ್ಞಾನಿಕ ವರದಿ ಸಿದ್ಧಪಡಿಸಿ ಕ್ರಮ ಕೈಗೊಳ್ಳಬೇಕು. ಉದ್ಯೋಗ ಮತ್ತು ಶಿಕ್ಷಣದಲ್ಲಿ ಹೆಚ್ಚಿನ ಮೀಸಲಾತಿ ನೀಡಬೇಕು~ ಎಂದು ಅವರು ಒತ್ತಾಯಿಸಿದರು.`ಅಂಗವಿಕಲರು ಸಂಕುಚಿತ ಭಾವನೆ ಬಿಟ್ಟು ತಮ್ಮಲ್ಲಿರುವ ಪ್ರತಿಭೆ ಮತ್ತು ಶಕ್ತಿಯನ್ನು ತೋರಿಸಬೇಕು~ ಎಂದು ಅವರು ಕರೆ ನೀಡಿದರು.ಆಕಸ್ಮಿವಾಗಿ ಬಂದ ದೋಷದಿಂದ ಹಲವರು ಅಂಗವಿಕಲತೆಯನ್ನು ಅನುಭವಿಸುತ್ತಿದ್ದಾರೆ. ಇದನ್ನು ನಿವಾರಿಸಿ ಅಂಗವಿಕಲರು ಬೆಳೆಯಲು ಅವಕಾಶ ಮಾಡಿಕೊಡುವುದು ನಾಗರಿಕ ಸಮಾಜದ ಕರ್ತವ್ಯವಾಗಿದೆ. ಹಕ್ಕು ಮತ್ತು ಸಮಾನತೆ ಅಂಗವಿಕಲರಿಗೂ ಇದೆ. ಅವರಿಗೆ ಆಗಿರುವ ಅನ್ಯಾಯವನ್ನು ಹೋಗಲಾಡಿಸಲು ಕ್ರಿಯಾತ್ಮಕವಾಗಿ ಹೋರಾಟ ಮಾಡುವ ಅಗತ್ಯವಿದೆ~ ಎಂದು ಸಾಹಿತಿ   ಪ್ರೊ.ಎಲ್.ಎಸ್.ಶೇಷಗಿರಿರಾವ್ ಹೇಳಿದರು.`ಅಂತರಾಕ್ಷಿ ಮಾಸ ಪತ್ರಿಕೆಯನ್ನು ರಾಜ್ಯದ ಎಲ್ಲ ಎಂಟು ನೂರು ಗ್ರಂಥಾಲಯಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುತ್ತದೆ~ ಎಂದು ಗ್ರಂಥಾಲಯ ಇಲಾಖೆ ನಿರ್ದೇಶಕ ಕೆ.ಜಿ.ಸುರೇಶ್ ಭರವಸೆ ನೀಡಿದರು.

ಕವಿ ಡಾ.ಸುಮತೀಂದ್ರ ನಾಡಿಗ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಅಂಗವಿಕಲ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ನಿರ್ದೇಶಕ ವೆಂಕಟೇಶ ಮಾಚಕನೂರು, ಗ್ರಂಥಾಲಯ ಇಲಾಖೆಯ ನಿವೃತ್ತ ನಿರ್ದೇಶಕ     ಎಸ್.ಬಿ.ಹೊಂಡದಕೇರಿ, ವೇದಿಕೆ ಸಂಚಾಲಕ ರಮೇಶ್‌ಕುಮಾರ್    ಮತ್ತಿತರರು ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.