ಅಂಗವಿಕಲ ಮಕ್ಕಳನ್ನು ಶಾಲೆಗೆ ಸೇರಿಸಿ

7

ಅಂಗವಿಕಲ ಮಕ್ಕಳನ್ನು ಶಾಲೆಗೆ ಸೇರಿಸಿ

Published:
Updated:
ಅಂಗವಿಕಲ ಮಕ್ಕಳನ್ನು ಶಾಲೆಗೆ ಸೇರಿಸಿ

ಚಿಕ್ಕಬಳ್ಳಾಪುರ: ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕುಗಳ ಕಾಯ್ದೆ, ಕರ್ನಾಟಕ ಮಕ್ಕಳ ಶಿಕ್ಷಣ ಹಕ್ಕು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ (ಎಪಿಡಿ) ನೇತೃತ್ವದಲ್ಲಿ ಮಕ್ಕಳು ಶುಕ್ರವಾರ ನಗರದಲ್ಲಿ ಜಾಗೃತಿ ರ‌್ಯಾಲಿ ನಡೆಸಿದರು.

ನಗರದ ಜೂನಿಯರ್ ಕಾಲೇಜು ಮೈದಾನದ ಆವರಣದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸುರೇಖಾ ವಿಜಯಪ್ರಕಾಶ್ ಮಾತನಾಡಿ, `ಸರ್ವ ಶಿಕ್ಷಣ ಅಭಿಯಾನದ ಮೂಲಕ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಸರ್ವಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ವಿಶೇಷ ಮಕ್ಕಳಿಗಾಗಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸುವುದರ ಜೊತೆಗೆ ಉಚಿತವಾಗಿ ಸಾಧನ-ಸಲಕರಣೆಗಳನ್ನು ವಿತರಿಸಲಾಗುತ್ತಿದೆ. ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರವನ್ನು ಸ್ಥಾಪಿಸಲಾಗಿದೆ. ಇನ್ನಷ್ಟು ಯೋಜನೆಗಳನ್ನು ಅಂಗವಿಕಲ ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು~ ಎಂದು ಹೇಳಿದರು.

ಜೂನಿಯರ್ ಕಾಲೇಜು ಮೈದಾನದಿಂದ ಆರಂಭಗೊಂಡ ಮೆರವಣಿಗೆ ಬಿ.ಬಿ.ರಸ್ತೆ, ಬಜಾರ್ ರಸ್ತೆ, ನಗರಸಭೆ ವೃತ್ತ, ಗಂಗಮ್ಮಗುಡಿ ರಸ್ತೆ, ಎಂ.ಜಿ.ರಸ್ತೆ, ಶಿಡ್ಲಘಟ್ಟ ವೃತ್ತದ ಮೂಲಕ ಸಾಗಿತು. ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿ ಫರಿಷ್ತಾ, ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ರಾಮರಾಜ್ ಅರಸ್, ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ, ಎಪಿಡಿ ಸಂಸ್ಥೆಯ ಸಂಯೋಜಕರಾದ ಲಿಂಗಪ್ಪ, ಉಷಾರಾಣಿ ಇತರರು ರ‌್ಯಾಲಿಯಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry