ಅಂಗವಿಕಲ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ

ಶುಕ್ರವಾರ, ಜೂಲೈ 19, 2019
28 °C

ಅಂಗವಿಕಲ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ

Published:
Updated:

ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್‌ಗಳಿಗೆ ಸರ್ಕಾರಿ ಕೋಟಾದ ಅಡಿ ಪ್ರವೇಶ ಬಯಸಿ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದಿದ್ದ ಅಂಗವಿಕಲ ವಿದ್ಯಾರ್ಥಿಗಳಿಗೆ ಗುರುವಾರ ವೈದ್ಯಕೀಯ ತಪಾಸಣೆ ನಡೆಯಿತು. ಅಂಗವಿಕಲ ವಿದ್ಯಾರ್ಥಿಗಳಿಗೆ ಶುಕ್ರವಾರ ಕೌನ್ಸೆಲಿಂಗ್ ನಡೆಯಲಿದೆ.ರಾಜ್ಯದ ವಿವಿಧ ಭಾಗಗಳಿಂದ 150 ಅಂಗವಿಕಲ ವಿದ್ಯಾರ್ಥಿಗಳು ವೈದ್ಯಕೀಯ ತಪಾಸಣೆಗೆ ಹಾಜರಾಗಿದ್ದರು. ಇವರ ಪೈಕಿ ಶೇಕಡ 40ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿರುವ 103 ವಿದ್ಯಾರ್ಥಿಗಳಿಗೆ ಮಾತ್ರ ಅಂಗವಿಕಲರ ಕೋಟಾದ ಅಡಿಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಸೀಟುಗಳು ದೊರೆಯಲಿವೆ. ನಾಲ್ಕು ವಿದ್ಯಾರ್ಥಿಗಳನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.ಅಂಗವಿಕಲರ ಕೋಟಾ ಅಡಿ 41 ವೈದ್ಯಕೀಯ, 17 ದಂತ ವೈದ್ಯಕೀಯ ಮತ್ತು 900 ಎಂಜಿನಿಯರಿಂಗ್ ಸೀಟುಗಳು ದೊರೆಯಲಿವೆ.ಹಿಂದಿನ ವರ್ಷ ಸಿಇಟಿ ಬರೆದೂ ಬಿಎಎಂಎಸ್ ಸೀಟು ಗಿಟ್ಟಿಸುವಲ್ಲಿ ವಿಫಲರಾಗಿದ್ದ ಶಿವಮೊಗ್ಗದ ಎಚ್. ಹರ್ಷ ಅವರು ಈ ಬಾರಿ ತಮ್ಮ ಇಷ್ಟದ ಕೋರ್ಸ್‌ಗೆ ಸೀಟು ದೊರೆಯುವ ಭರವಸೆಯಲ್ಲಿದ್ದಾರೆ. ತಮಗೆ ಇಷ್ಟವಾದ ಕೋರ್ಸ್ ಕಳೆದ ಬಾರಿ ದೊರೆಯಲಿಲ್ಲ ಎಂಬ ಕಾರಣಕ್ಕಾಗಿ ಇವರು ಈ ಬಾರಿ ಮತ್ತೊಮ್ಮೆ ಸಿಇಟಿ ಪರೀಕ್ಷೆ ಬರೆದಿದ್ದರು.ವೈದ್ಯಕೀಯ ತಪಾಸಣೆಗೆ ಬಂದಿದ್ದ ಕಾರವಾರದ ಭಾವನಾ ಮಹದೇವ ಅಂಬಿ ಅವರು, `ಸೀಟು ದೊರೆತಲ್ಲಿ ವೈದ್ಯಕೀಯ ಕೋರ್ಸ್‌ಗೆ ಸೇರುವ ಆಸೆ ಇದೆ. ಅಲ್ಲಿ ಸೀಟು ದೊರೆಯದಿದ್ದಲ್ಲಿ ಎಂಜಿನಿಯರಿಂಗ್ ಆಯ್ಕೆ ಮಾಡಿಕೊಳ್ಳುತ್ತೇನೆ~ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry