ಭಾನುವಾರ, ಮೇ 16, 2021
26 °C

ಅಂಚೆ ಇಲಾಖೆ, ಸರ್ಕಾರಕ್ಕೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಸಂತನಗರದ ಅಂಚೆ ಕಚೇರಿಯನ್ನು ಪುನರಾರಂಭಿಸುವಂತೆ ಕೋರಿ ಹಿರಿಯ ನಾಗರಿಕರೊಬ್ಬರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿರುವ ಹೈಕೋರ್ಟ್, ಈ ಸಂಬಂಧ ಅಂಚೆ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಆದೇಶಿಸಿದೆ.ಅಂಚೆ ಕಚೇರಿಯನ್ನು ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿ ಸತೀಂದ್ರಪಾಲ್ ಚೋಪ್ರಾ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ವಿಭಾಗೀಯ ಪೀಠದಲ್ಲಿ ಗುರುವಾರ ನಡೆಯಿತು. ಸ್ವತಃ ವಾದ ಮಂಡಿಸಿದ ಚೋಪ್ರಾ, ಅಂಚೆ ಕಚೇರಿಯ ಪುನರಾರಂಭಕ್ಕೆ ಆದೇಶಿಸುವಂತೆ ಮನವಿ ಮಾಡಿದರು.`ಖಾಸಗಿ ಕಟ್ಟಡದಲ್ಲಿದ್ದ ಅಂಚೆ ಕಚೇರಿಯನ್ನು ಒಂದೂವರೆ ವರ್ಷದ ಹಿಂದೆ ಮುಚ್ಚಲಾಗಿದೆ. ಇದರಿಂದ ಸಾರ್ವಜನಿಕರಿಗೆ, ಅದರಲ್ಲೂ ಹಿರಿಯ ನಾಗರಿಕರಿಗೆ ತೀವ್ರ ತೊಂದರೆ ಆಗಿದೆ. ಸಮೀಪದ ಮಿಲ್ಲರ್ ರಸ್ತೆಯಲ್ಲಿರುವ ಅಂಚೆ ಇಲಾಖೆಯ `ಮೇಲ್ ಮೋಟಾರ್ ಸರ್ವೀಸ್~ ಕಚೇರಿಯ ಕಟ್ಟಡದಲ್ಲಿ 4,000 ಚದರ ಅಡಿ ಸ್ಥಳಾವಕಾಶ ಲಭ್ಯವಿದೆ. ಅಲ್ಲಿ ಅಂಚೆ ಕಚೇರಿ ಪುನರಾರಂಭಿಸುವಂತೆ ಮಾಡಿದ ಮನವಿಯನ್ನು ಅಂಚೆ ಇಲಾಖೆ ತಿರಸ್ಕರಿಸಿದೆ~ ಎಂದು ಚೋಪ್ರಾ ನ್ಯಾಯಾಲಯಕ್ಕೆ ತಿಳಿಸಿದರು.ಪ್ರಕರಣದ ಸಂಬಂಧ ಅಂಚೆ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.