ಸೋಮವಾರ, ಮೇ 17, 2021
28 °C

ಅಂಚೆ ಕಚೇರಿಯಲ್ಲಿ ಆಧಾರ ಕೇಂದ್ರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಆಧಾರ ವಿಶಿಷ್ಟ ಗುರುತಿನ ಸಂಖ್ಯೆ ನೀಡುವ ಕೇಂದ್ರವನ್ನು ಇಲ್ಲಿಯ ಪ್ರಧಾನ ಅಂಚೆ ಕಚೇರಿಯಲ್ಲಿ ಆರಂಭಿಸಲಾಗಿದ್ದು, ಬುಧವಾರ ಸಹಾಯಕ ಆಯುಕ್ತೆ ಕವಿತಾ ಮನ್ನಿಕೇರಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕನಿಗೂ ಅವಶ್ಯಕವಾಗಿರುವ ವಿಶಿಷ್ಟ ಗುರುತಿನ ಸಂಖ್ಯೆ ನೀಡುವ ಆಧಾರ ಯೋಜನೆಯನ್ನು ಈಗಾಗಲೇ ಜಿಲ್ಲೆಯಲ್ಲಿ ಆರಂಭಿಸಲಾಗಿದ್ದು, ನೋಂದಣಿ ಕಾರ್ಯ ನಡೆದಿದೆ. ಜನರ ಅನುಕೂಲಕ್ಕಾಗಿ ಇಲ್ಲಿಯ ಪ್ರಧಾನ ಅಂಚೆ ಕಚೇರಿಯಲ್ಲಿಯೂ ಈ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.ಆಧಾರ ಗುರುತಿನ ಸಂಖ್ಯೆಯು ಉಪಯುಕ್ತ, ಉತ್ಕೃಷ್ಟ ದಾಖಲೆ ಇದ್ದಂತೆ. ಈ ಆಧಾರ ಕಾರ್ಡುಗಳು ಎಲ್ಲರಿಗೂ ಅವಶ್ಯಕವಾಗಿದ್ದು, ಇದರ ಸದುಪಯೋಗ ಪಡೆಯಬೇಕು ಎಂದು ಸಲಹೆ ಮಾಡಿದರು.ನಗರಸಭೆ ಅಧ್ಯಕ್ಷೆ ನಾಗರತ್ನಾ ಅನಪೂರ ಮಾತನಾಡಿ, ಆಧಾರ ಎಲ್ಲ ನಾಗರಿಕರಿಗೂ ಆಧಾರವಿದ್ದಂತೆ. ಜನರು ನಿರ್ಲಕ್ಷ್ಯ ಮಾಡದೇ ಕಡ್ಡಾಯವಾಗಿ ಆಧಾರ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಯಾದಗಿರಿ ಉಪವಿಭಾಗದ ಅಂಚೆ ಅಧೀಕ್ಷಕ ಎಸ್.ಎಸ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಅಂಚೆ ಪಾಲಕ ಎ.ವಿ. ಗಿರಿ, ಪ್ರಾಸ್ತಾವಿಕವಾಗಿ ಮಾತನಾಡಿ, ಆಧಾರ ಗುರುತಿನ ಚೀಟಿಯ ಕುರಿತು ಮಾಹಿತಿ ನೀಡಿದರು. ಪ್ರಧಾನ ಅಂಚೆ ಕಚೇರಿಯ ಸಿಬ್ಬಂದಿ ಭಾಗವಹಿಸಿದ್ದರು. ಕುಪೇಂದ್ರ ವಠಾರ್ ಸ್ವಾಗತಿಸಿ, ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.