ಬುಧವಾರ, ಮೇ 25, 2022
30 °C

ಅಂಚೆ, ಬಿಎಸ್ಸೆನ್ನೆಲ್ ಕಚೇರಿಗೆ ಮುತ್ತಿಗೆ: 80 ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಅಗತ್ಯವ ಸ್ತುಗಳ ಬೆಲೆ ಏರಿಕೆ ಖಂಡಿಸಿ ನಗರದ ಪ್ರಧಾನ ಅಂಚೆ ಕಚೇರಿ ಮತ್ತು ಬಿಎಸ್‌ಎನ್‌ಎಲ್ ಕಚೇರಿಗೆ ಮುತ್ತಿಗೆ ಹಾಕಿ ಜೈಲ್ ಭರೋ ಚಳವಳಿ ನಡೆಸಿದ ಬಿಜೆಪಿಯ 80 ಮಂದಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಿರು.ಶುಕ್ರವಾರ ಬೆಳಿಗ್ಗೆ ಬಿಜೆಪಿ ಜಿಲ್ಲಾ ಕಚೇರಿ ಪಾಂಚಜನ್ಯದಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಆಜಾದ್ ವೃತ್ತಕ್ಕೆ ಬರುತ್ತಿದ್ದಂತೆ ಎರಡು ತಂಡಗಳಾಗಿ ಚದುರಿದರು. ಒಂದು ತಂಡ ಪಕ್ಷದ ಜಿಲ್ಲಾ ಅಧ್ಯಕ್ಷ ಎಂ.ಕೆ.ಪ್ರಾಣೇಶ್ ನೇತೃತ್ವದಲ್ಲಿ ಅಂಚೆ ಕಚೇರಿಗೆ ಮುತ್ತಿಗೆ ಹಾಕಿದರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಆರ್. ಪ್ರೇಂಕುಮಾರ್ ನೇತೃತ್ವದಲ್ಲಿ ಕಾರ್ಯಕರ್ತರು ಬಿಎಸ್‌ಎನ್‌ಎಲ್ ಕಚೇರಿಗೆ ಮುತ್ತಿಗೆ ಹಾಕಿದರು.ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಜಾದ್ ವೃತ್ತದ ಬಳಿ ರಸ್ತೆ ತಡೆ ನಡೆಸಲು ಮುಂದಾಗ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ನಂತರ ಅಲ್ಲಿಂದ ಎರಡು ತಂಡಗಳಾಗಿ ಮುಂದೆ ಸಾಗಿದ ಒಂದು ತಂಡ ನಾಯ್ಡು ರಸ್ತೆಯಲ್ಲಿರುವ ಪ್ರಧಾನ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕೇಂದ್ರ ಸರ್ಕಾರ ತಗ್ಗಿಸಬೇಕು ಎಂದು ಆಗ್ರಹಿಸಿದರು.ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿಯೊಳಗೆ ನುಗ್ಗಲು ಮುಂದಾಗುತ್ತಿದ್ದಂತೆ ಪೊಲೀಸರು ಮತ್ತು ಪ್ರತಿಭಟನಾನಿರತರ ನಡುವೆ ತಳ್ಳಾಟ ನಡೆಯಿತು. ನಗರ ಸಿಪಿಐ ಮಧುಸೂಧನ್ ಮತ್ತು ಠಾಣಾಧಿಕಾರಿ ಸತೀಶ್ ಹಾಗೂ ಸಿಬ್ಬಂದಿ ಮುನ್ನೆಚ್ಚ ರಿಕೆಯಾಗಿ ಪ್ರತಿಭಟನಾಕಾರರನ್ನು ಅಂಚೆ ಕಚೇರಿ ಬಾಗಿಲಲ್ಲೇ ತಡೆದರು. ಅಂಚೆ ಕಚೇರಿ ಎದುರು ಘೋಷಣೆ ಕೂಗಿದ ಪ್ರತಿಭಟನಾಕಾರರು, ದಿನನಿತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿ ಜನಜೀವನ ಸಮಸ್ಯೆಗೆ ಸಿಲುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರದ ವಿರುದ್ಧದ ಘೋಷಣೆ ಫಲಕ ಪ್ರದರ್ಶಿಸಿ, ಕಚೇರಿ ಆವರಣದಲ್ಲೇ ಕೆಲ ಕಾಲ ಧರಣಿ ನಡೆಸಿದರು.ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಎಪಿಎಂಸಿ ಅಧ್ಯಕ್ಷ ವೆಂಕಟೇಶ್ ಸೇರಿದಂತೆ ಬಹುತೇಕ ಮುಖಂಡರು ಬಂಧನಕ್ಕೆ ಒಳಗೆ ಹೋಗಲು ನಿರಾಕರಿಸಿದ್ದರಿಂದ ಅವರನ್ನು ಬಲವಂತವಾಗಿ ಪೊಲೀಸರು ವಶಕ್ಕೆ ಪಡೆದು, ಪೊಲೀಸ್ ವ್ಯಾನ್‌ಗೆ ಹತ್ತಿಸಿಕೊಂಡರು.ಪಕ್ಷದ ಕಾರ್ಯದರ್ಶಿ ಕಲ್ಮರಡಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಂಜುನಾಥ, ಪುಷ್ಪರಾಜ್, ನಗರಸಭೆ ಸದಸ್ಯರಾದ ಸುಬ್ಬಣ್ಣ, ಮಂಜುನಾಥ, ಕೇಶವ, ರವೀಂದ್ರ, ಅಲ್ಪಸಂಖ್ಯಾತರ ವಿಭಾಗದ ಮುಖಂಡ ಖರೇಶಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.ಇನ್ನೊಂದೆಡೆ ಬಿಎಸ್‌ಎನ್‌ಎಲ್ ಕಚೇರಿಗೆ ಮುತ್ತಿಗೆ ಹಾಕಿದ ಪಕ್ಷದ ಜಿಲ್ಲಾ ಉಪಾಧ್ಯಕ್ಷೆ ರೇಖಾಹುಲಿಯಪ್ಪ ಗೌಡ, ಕಾರ್ಯದರ್ಶಿ ವರಸಿದ್ಧಿ ವೇಣು ಗೋಪಾಲ್, ವಕ್ತಾರ ಬಿ.ರಾಜಪ್ಪ, ಮುಖಂಡರಾದ ಎಚ್.ಡಿ. ತಮ್ಮಯ್ಯ, ದೇವರಾಜಶೆಟ್ಟಿ, ತಾಲ್ಲೂಕು ಗ್ರಾಮಾಂತರ ಅಧ್ಯಕ್ಷ ಕನಕರಾಜ್, ನಗರ ಅಧ್ಯಕ್ಷ ನಾರಾಯಣಗೌಡ, ಅಪ್ಸರ್ ಅಹ್ಮದ್, ಮಹಿಳಾ ಮೋರ್ಚಾದ ಮುಖಂಡರಾದ ಗೀತಾ, ವೀಣಾ ಆರ್.ಶೆಟ್ಟಿ, ಸಾವಿತ್ರಿ, ಯಮುನಾ ಚನ್ನಬಸಪ್ಪ, ಹಿತಾಕ್ಷಿಚನ್ನಕೇಶವ, ಸೂರ್ಯ ಗೋವಿಂದ, ವೇದಾ ಅವರನ್ನು ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಂಡು, ನಂತರ ಬಿಡುಗಡೆಗೊಳಿಸಿದರು.ಪಕ್ಷದ ಜಿಲ್ಲಾ ಅಧ್ಯಕ್ಷ ಎಂ.ಕೆ.ಪ್ರಾಣೇಶ್, ಉಪಾಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಇತರರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.