ಭಾನುವಾರ, ಜನವರಿ 19, 2020
23 °C

ಅಂತರರಾಷ್ಟ್ರೀಯ ಮಟ್ಟದ ಪ್ರಕೃತಿ ಚಿಕಿತ್ಸೆ ಸಮ್ಮೇಳನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಂತರರಾಷ್ಟ್ರೀಯ ಮಟ್ಟದ ಯೋಗ, ಪ್ರಕೃತಿ ಚಿಕಿತ್ಸೆ ಮತ್ತು ಆರೋಗ್ಯ ವಸ್ತು ಪ್ರದರ್ಶನ ಮತ್ತು ಸಮ್ಮೇಳನ ಫೆಬ್ರುವರಿ 9ರಿಂದ 13ರವರೆಗೆ ನಗರದಲ್ಲಿ ನಡೆಯಲಿದೆ.  ಈ ಸಂದರ್ಭದಲ್ಲಿ ಸಮ್ಮೇಳನದಲ್ಲಿ ನೀಡುವ ಆಹಾರ ಕೂಡ ಪ್ರಕೃತಿ ಚಿಕಿತ್ಸೆಗೆ ಪೂರಕವಾಗಿಯೇ ಇರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಹೇಳಿದರು.ಫೆ.10ರಂದು ಸಮ್ಮೇಳನದ ಉದ್ಘಾಟನೆ ನಡೆಯಲಿದೆ. ಆ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವ ಗುಲಾಂ ನಬಿ ಅಜಾದ್, ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಸೇರಿದಂತೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಯೋಗ ತಜ್ಞರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಪ್ರತಿಕ್ರಿಯಿಸಿ (+)