ಅಂತಿಮ ಸುತ್ತಿನ ಸೀಟು ಹಂಚಿಕೆ

7

ಅಂತಿಮ ಸುತ್ತಿನ ಸೀಟು ಹಂಚಿಕೆ

Published:
Updated:

ಬೆಂಗಳೂರು: ವೈದ್ಯಕೀಯ/ದಂತ ವೈದ್ಯಕೀಯ ವಿಭಾಗದಲ್ಲಿ ಖಾಲಿ ಇದ್ದ ಸೀಟು ಗಳನ್ನು ಶುಕ್ರವಾರ ಹಂಚಿಕೆ ಮಾಡಿದ್ದು, ಸೀಟು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳು ಇದೇ 24ರ ಒಳಗೆ ಪ್ರವೇಶ ಪಡೆಯಬೇಕು.ವೈದ್ಯಕೀಯ ವಿಭಾಗದಲ್ಲಿ 100 ಹಾಗೂ ದಂತ ವೈದ್ಯಕೀಯ ವಿಭಾಗದಲ್ಲಿ 166 ಮಂದಿಗೆ ಸೀಟು ಹಂಚಿಕೆ ಮಾಡ ಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.ಸೀಟು ಹಂಚಿಕೆ ಪಟ್ಟಿ ಹಾಗೂ ಶುಲ್ಕ ಪಾವತಿ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆ ಪ್ರಕಾರ ನಿಗದಿತ ಶುಲ್ಕ ಪಾವತಿಸಿ ಪ್ರವೇಶ ಪಡೆಯಬೇಕು ಎಂದು ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry