ಅಂಧರ ಕ್ರಿಕೆಟ್: ಭಾರತಕ್ಕೆ ಸುಲಭ ಜಯ

7

ಅಂಧರ ಕ್ರಿಕೆಟ್: ಭಾರತಕ್ಕೆ ಸುಲಭ ಜಯ

Published:
Updated:

ಬೆಂಗಳೂರು: ಭಾರತ ತಂಡದವರು ಅಂಧರ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 10 ವಿಕೆಟ್‌ಗಳ ಸುಲಭ ಗೆಲುವು ಪಡೆಯಿತು.ಸೆಂಟ್ರಲ್ ಕಾಲೇಜು ಮೈದಾನದಲ್ಲಿ ಭಾನುವಾರ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 57 ರನ್ ಪೇರಿಸಿತು.

ಭಾರತ ಕೇವಲ 11 ಎಸೆತಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ 58 ರನ್ ಗಳಿಸಿ ಜಯ ಸಾಧಿಸಿತು.ದಿನದ ಮತ್ತೊಂದು ಪಂದ್ಯದಲ್ಲಿ ಪಾಕಿಸ್ತಾನ 9 ವಿಕೆಟ್‌ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತು. ಶನಿವಾರ ನೀರೆಂದು ಭಾವಿಸಿ ಫಿನಾಯಿಲ್ ಕುಡಿದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಪಾಕ್ ತಂಡದ ನಾಯಕ ಜೀಶನ್ ಅಬ್ಬಾಸಿ ಈ ಪಂದ್ಯದಲ್ಲಿ ಆಡಲಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry