ಸೋಮವಾರಪೇಟೆ: ಇಲ್ಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಎನ್ಆರ್ಎಚ್ಎಂ ಯೋಜನೆಯಡಿ ಮಂಜೂರಾಗಿರುವ ನೂತನ ಅಂಬುಲೆನ್ಸ್ಗೆ ಶಾಸಕ ಅಪ್ಪಚ್ಚು ರಂಜನ್ ಸೋಮವಾರ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ತಾಲ್ಲೂಕಿನ ಸೋಮವಾರಪೇಟೆ ಹಾಗೂ ಕುಶಾಲನಗರ ಸರ್ಕಾರಿ ಆಸ್ಪತ್ರೆಗಳಿಗೆ ಅಂಬುಲೆನ್ಸ್ ಬಿಡುಗಡೆಯಾಗಿದೆ. ಬಿಪಿಎಲ್ ಕಾರ್ಡುದಾರರಿಗೆ ವಾಹನದ ಉಚಿತ ಸೇವೆಯನ್ನು ನೀಡಲಾಗುವುದು.

ಗರ್ಭಿಣಿಯರಿಗೂ ರಿಯಾಯಿತಿ ದರದಲ್ಲಿ ವಾಹನ ಸೌಲಭ್ಯ ದೊರೆಯಲಿದೆ. ಎಪಿಎಲ್ ಪಡಿತರದಾರರು ನಿಗದಿತ ಶುಲ್ಕ ಪಾವತಿಸಬೇಕಾಗುತ್ತದೆ. ಆರೋಗ್ಯ ಇಲಾಖೆಯ 108 ವಾಹನ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದರು. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ತಾಲ್ಲೂಕು ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಘಟಕವನ್ನು ತೆರೆಯಲಾಗುವುದು.

ಅಲ್ಲದೇ, ಪ್ರತಿ ತಾಲ್ಲೂಕು ಕೇಂದ್ರಗಳಲ್ಲೂ ರಕ್ತ ಶೇಖರಣಾ ಘಟಕವನ್ನು ಆರಂಭಿಸಲಾಗುವುದು ಎಂದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ. ಶಿವಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾ ನಿರ್ವಾಣಿ, ಮಹಿಳಾ ಮೋರ್ಚಾ ರಾಜ್ಯ ಸಮಿತಿ ಸದಸ್ಯೆ ಲೋಕೇಶ್ವರಿ ಗೋಪಾಲ್, ವೈದ್ಯಾಧಿಕಾರಿ ಡಾ. ಕೃಷ್ಣಾನಂದ ಮತ್ತು ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.