ಸೋಮವಾರ, ಮೇ 17, 2021
28 °C

ಅಂಬುಲೆನ್ಸ್-ಲಾರಿ ಡಿಕ್ಕಿ: 12 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿಂಧನೂರು: ದಡೇಸುಗೂರು ಬಳಿ ಮಂಗಳವಾರ ಮುಂಜಾನೆ ಅಂಬುಲೆನ್ಸ್ ಮತ್ತು ಲಾರಿ ಮಧ್ಯೆ ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ 11 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಗಂಗಮ್ಮ ಸಾವನ್ನಪ್ಪಿದ್ದಾಳೆ. ಇತರ ನಾಲ್ವರಿಗೆ ತೀವ್ರ ಗಾಯಗಳಾಗಿವೆ.ಯಾದಗಿರಿ ತಾಲ್ಲೂಕಿನ ಗ್ರಾಮಸ್ಥರು ಕೂಲಿ ಕೆಲಸಕ್ಕೆಂದು ಬೆಂಗಳೂರಿಗೆ ಹೋಗಿದ್ದರು. ಕಾಯಿಲೆಯಿಂದ ಮೃತಪಟ್ಟ ನಿಂಗಪ್ಪನ ಶವವನ್ನು ಅಂಬುಲೆನ್ಸ್‌ನಲ್ಲಿ ತೆಗೆದುಕೊಂಡು ಬರುತ್ತಿರುವಾಗ ಸಿಂಧನೂರು ಕಡೆಯಿಂದ ಬಳ್ಳಾರಿಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಚಾಲಕರು ನಿದ್ರೆ ಮಂಪರಿನಲ್ಲಿ ಇದ್ದುದೇ ದುರ್ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.