ಮಂಗಳವಾರ, ಏಪ್ರಿಲ್ 13, 2021
32 °C

ಅಂಬೇಡ್ಕರ್ ಜಯಂತಿ ಬಹಿಷ್ಕಾರಕ್ಕೆ ತೀರ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಕೋಟೆ: ತಾಲ್ಲೂಕು ಆಡಳಿತವು ಇದೇ ತಿಂಗಳ 14ರಂದು ಆಯೋಜಿಸಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ತಾಲ್ಲೂಕಿನ ವಿವಿಧ ಪ್ರಗತಿಪರ ದಲಿತ ಸಂಘಟನೆಗಳು ಬಹಿಷ್ಕರಿಸಲು ತೀರ್ಮಾನಿಸಿವೆ. ಹಲವು ವರ್ಷಗಳಿಂದ ತಾಲ್ಲೂಕು ಕೇಂದ್ರದಲ್ಲಿ ಅಂಬೇಡ್ಕರ್ ಭವನ ಮತ್ತು ಪ್ರತಿಮೆ ಸ್ಥಾಪಿಸುವಂತೆ ಮನವಿ ಸಲ್ಲಿಸಿದ್ದರೂ ತಾಲ್ಲೂಕು ಆಡಳಿತ ಮತ್ತು ಜನಪ್ರತಿನಿಧಿಗಳು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ಬಂದಿದ್ದಾರೆ ಎಂದು ದೂರಲಾಗಿದೆ.

 

ಆಡಳಿತದ ನಿರ್ಲಕ್ಷವನ್ನು ಖಂಡಿಸಲು ಬಹಿಷ್ಕಾರಕ್ಕೆ ನಿರ್ಧರಿಸಲಾಗಿದೆ ಎಂದು ದಲಿತ ಮುಖಂಡ ಪಿ.ಎಂ. ಚಿನ್ನಸ್ವಾಮಿ ಸೋಮವಾರ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಇದಕ್ಕೆ ಪರ್ಯಾಯವಾಗಿ ಸಂಘಟನೆ ವತಿಯಿಂದ ಏಪ್ರಿಲ್ ತಿಂಗಳ ಕೊನೆಯ ವಾರದಲ್ಲಿ ಜಯಂತಿ ಆಚರಿಸಲಾಗುವುದು’ ಎಂದು ತಿಳಿಸಿದರು. ಮುಖಂಡರಾದ ಆಂಜಿನಪ್ಪ, ಎಚ್.ವಿ.ವೆಂಕಟೇಶ್, ನಟರಾಜ್, ಬೈರಪ್ಪ, ದುನ್ನಸಂದ್ರ ಅಶ್ವಥ್ ಮತ್ತಿತರರು ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.