ಅಂಬೇಡ್ಕರ್ ಜಯಂತಿ ಸರಳ ಆಚರಣೆ

7

ಅಂಬೇಡ್ಕರ್ ಜಯಂತಿ ಸರಳ ಆಚರಣೆ

Published:
Updated:

ಗುಲ್ಬರ್ಗ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 122ನೇ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು.ನಗರದ ಜಗತ್ ವೃತ್ತದಲ್ಲಿರುವ ಅಂಬೇಡ್ಕರರ ಪುತ್ಥಳಿಗೆ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸತೀಶಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲವಿ ಆಕುರಾತಿ ಮತ್ತಿತರ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ಡಿವೈಎಸ್‌ಪಿ ಕಾಶೀನಾಥ ಎಸ್.ತಳಕೇರಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ವಸಂತ ಕುಲಕರ್ಣಿ, ಡಿ.ಆರ್.ಡಿ.ಎ. ಯೋಜನಾ ನಿರ್ದೇಶಕ ಎಸ್.ಎಂ. ಕೆಂಚಣ್ಣನವರ್, ಮಹಾನಗರ ಪಾಲಿಕೆ ಆಯುಕ್ತ ಪಿ.ರವೀಂದ್ರ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಡಿ. ಸುರೇಶ್ ಜಾಧವ್ ಮತ್ತು ಸಿಬ್ಬಂದಿ, ಎಸ್.ಸಿ./ಎಸ್.ಟಿ. ಜನಾಂಗದ ಮುಖಂಡರು ಹಾಜರಿದ್ದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಸಂಘಟಿಸಲಾಗಿತ್ತು.ಜಿಪಂ ಕಾರ್ಯಾಲಯ:  ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲವಿ ಆಕುರಾತಿ, ಉಪಕಾರ್ಯದರ್ಶಿ ವಸಂತ ಕುಲಕರ್ಣಿ, ಮುಖ್ಯ ಯೋಜನಾಧಿಕಾರಿ ವಿರೂಪಾಕ್ಷಪ್ಪ ಕಿರಣಗಿ, ಡಿ.ಆರ್.ಡಿ.ಎ. ಯೋಜನಾ ನಿರ್ದೇಶಕ ಎಸ್.ಎಂ. ಕೆಂಚಣ್ಣನವರ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.ಸಹಾಯಕ ಯೋಜನಾಧಿಕಾರಿ ರಾಠೋಡ ಮತ್ತು ಇತರ ಸಿಬ್ಬಂದಿ ಹಾಜರಿದ್ದರು. ಇದಕ್ಕೂ ಮುನ್ನ ಬೌದ್ಧ ಧರ್ಮದ ಭಿಕ್ಕು ಸಂಘಾನಂದ ಭಂತೇಜಿ ಅವರು ಪ್ರಾರ್ಥನೆ ಸಲ್ಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry