ಗುರುವಾರ , ಏಪ್ರಿಲ್ 15, 2021
30 °C

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿರಿಯಾಪಟ್ಟಣ: ತಾಲ್ಲೂಕಿನ ನಿಲಂಗಾಲ ಗ್ರಾಮದಲ್ಲಿ ಡಾ.ಅಂಬೇಡ್ಕರ್ ಯುವಕ ಸಂಘದ ನಾಮಫಲಕದಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಸಗಣಿ ಬಳಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಇದರಿಂದ ಗ್ರಾಮದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.ಗ್ರಾಮದ ದಲಿತ ಮುಖಂಡರು ಮತ್ತು ಯುವಕರು ಆಕ್ರೋಶಗೊಂಡು ಪ್ರತಿಭಟನೆಗೆ ಮುಂದಾದರು. ತಹಶೀಲ್ದಾರ್ ವಿ.ಆರ್.ಶೈಲಜಾ ಮತ್ತು ಡಿವೈಎಸ್‌ಪಿ ಮುದ್ದುಮಹದೇವಯ್ಯ ಭೇಟಿ ನೀಡಿ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿದರು. ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಡಿವೈಎಸ್‌ಪಿ  ಭರವಸೆ ನೀಡಿದರು.2005ನೇ ಸಾಲಿನಲ್ಲಿ ಅಂಬೇಡ್ಕರ್ ಯುವಕ ಸಂಘ ಆರಂಭಿಸಿ ನಾಮಫಲಕ ಹಾಕಲಾಗಿದ್ದು, ಅದೇ ಜಾಗದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣ ಮಾಡುವ ಉದ್ದೇಶದಿಂದ ಬೇಲಿ ಸಹ ಹಾಕಲಾಗಿತ್ತು. ಗ್ರಾಮದ ಹೊನ್ನಗಿರಿಗೌಡ ಎಂಬುವರು ಈ ಜಾಗವನ್ನು ಅಂಗನವಾಡಿ ನಿರ್ಮಾಣಕ್ಕೆ ನೀಡಿದ್ದರು. ಇದರ ಪಕ್ಕದ್ಲ್ಲಲೇ ಇದ್ದ ಉಳಿದ ಜಾಗದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಲು ದಲಿತ ಯುವಕರು ಸ್ಥಳೀಯ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈ ಜಾಗ ಖಾಸಗಿ ವ್ಯಕ್ತಿಗಳಿಗೆ ಸೇರಿಲ್ಲ, ಸರ್ಕಾರದ್ದು ಎಂದು ಯುವಕರಿಗೆ ಮೌಖಿಕವಾಗಿ ತಪ್ಪು ಮಾಹಿತಿ ನೀಡಿದ್ದರು ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ನಡೆದ ಗ್ರಾಮ ಸಭೆಯಲ್ಲೂ ದಲಿತ ಯುವಕರು ಈ ಬಗ್ಗೆ ಚರ್ಚೆ ನಡೆಸಿದ್ದರು. ಸಭೆಗೆ ಕೋರಂ ಇಲ್ಲದ ಕಾರಣ ಸಭೆ ರದ್ದಾಗಿತ್ತು.ಶಾಂತಿಸಭೆಯಲ್ಲಿ  ಗ್ರಾಮ ಪಂಚಾಯಿತಿ ಪಿಡಿಒ ಕೃಷ್ಣಾನಂದ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸುವ ಪ್ರಯತ್ನ ನಡೆದರೂ ಅವರು ಸಿಗಲಿಲ್ಲ. ಈ ಬಗ್ಗೆ ಆಕ್ಷೇಪವೂ ವ್ಯಕ್ತವಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.