ಶನಿವಾರ, ಮೇ 15, 2021
24 °C

ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಗೌರವಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅರಕಲಗೂಡು:  ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವನ್ನು ಗೌರವಿಸಿ ಅದರ ಆಶಯದಂತೆ ನಡೆದುಕೊಂಡಾಗ ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ಸಲ್ಲುತ್ತದೆ ಎಂದು ಶಾಸಕ ಎ.ಮಂಜು ತಿಳಿಸಿದರು.ತಾಲ್ಲೂಕು ಆಡಳಿತ ಅಂಬೇಡ್ಕರ್ ಭವನದ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿಯ 121 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಿನಿವಿಧಾನ ಸೌಧದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ಥಾಪಿಸಲು ಸರ್ಕಾರ ಅನುಮತಿ ನೀಡಿದೆ. ಎಲ್ಲರ ಸಹಕಾರ ಪಡೆದು ಶೀಘ್ರದಲ್ಲೆ ಪ್ರತಿಮೆ ಸ್ಥಾಪನೆಗೆ ಮುಂದಾಗುವುದಾಗಿ ಹೇಳಿದರು.

ತಾಲ್ಲೂಕು ಪಂಚಾಯತಿ ಅಧ್ಯಕ್ಷ ಸಂತೋಷ್‌ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾನ್ ಮಾನವತಾವಾದಿ ಅಂಬೇಡ್ಕರ್ ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದರು.

ಹಾಸನದ ಎ.ವಿ.ಕೆ. ಕಾಲೇಜಿನ ಪ್ರಾಧ್ಯಾಪಕ ಡಾ. ಎಚ್.ಎಂ. ಪುಟ್ಟಸ್ವಾಮಿ ಅಂಬೇಡ್ಕರ್ ಬದುಕು ಹೋರಾಟ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ವಿ.ಎ.ನಂಜುಂಡಸ್ವಾಮಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯೆ ಭಾಗ್ಯಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಯೋಗೇಶ್, ಸತೀಶ್‌ಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಮ್ಮ ಗೋಪಾಲ್, ಸದಸ್ಯ ಶಂಕರಯ್ಯ, ತಹಶೀಲ್ದಾರ್ ಬಿ.ಎನ್. ವೀಣಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಿಡಿಪಿಒ ವೈ ಎಸ್. ಮಲ್ಲೇಗೌಡ ಸ್ವಾಗತಿಸಿದರು. ಇದಕ್ಕೂ ಮುನ್ನ ಮಿನಿವಿಧಾನ ಸೌಧದ ಆವರಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಶಾಸಕ ಮಂಜು ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಭೂಮಿ ಪೂಜೆ ನೆರವೇರಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು.

ದೊಡ್ಡಮಗ್ಗೆ: ತಾಲ್ಲೂಕಿನ ದೊಡ್ಡಮಗ್ಗೆ ಗ್ರಾ.ಪಂ. ಕಚೇರಿಯಲ್ಲಿ ಶನಿವಾರ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಬಿ.ವಿ. ತಿಮ್ಮೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯರಾದ ಎಂ.ಬಿ. ರಮೇಶ್, ಕಿಕ್ಕೇರಿಶೆಟ್ಟಿ, ಎಂ.ಎಲ್ ರಂಗನಾಥ, ಗೌರಮ್ಮ, ಅನ್ವರ್, ಪುಟ್ಟಸ್ವಾಮಿ, ದ.ಸಂ.ಸ. ಮುಖಂಡ ಸಣ್ಣಸ್ವಾಮಿ, ಗ್ರಾ.ಪಂ. ಕಾರ್ಯದರ್ಶಿ ಕೆ.ಎಸ್. ಸರಸ್ವತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಿಲ್ ಕಲೆಕ್ಟರ್ ಸ್ವಾಮಯ್ಯ ವಂದಿಸಿದರು.

ಬಿಜೆಪಿ: ತಾಲ್ಲೂಕು ಬಿಜೆಪಿ ಘಟಕವು ತಾಲ್ಲೂಕಿನ ಮಲ್ಲಿಪಟ್ಟಣ ಹೋಬಳಿ ಲಕ್ಷ್ಮೀಪುರ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಜನ್ಮ ದಿನಾಚರಣೆ ಆಚರಿಸಿತು. ಜಿಲ್ಲಾ ಬಿಜೆಪಿ ಸಂಘಟನಾ ಕಾರ್ಯದರ್ಶಿ ಎ.ಪಿ. ನಟೇಶ್‌ಕುಮಾರ್, ತಾಲ್ಲೂಕು ಘಟಕದ ಮುಖಂಡರಾದ ವಿಶ್ವನಾಥ್, ಪ್ರದೀಪ್ ಗ್ರಾಮಸ್ಥರುಗಳಾದ ದಯಾನಂದಕುಮಾರ್, ಚನ್ನಕೇಶವಯ್ಯ, ಗ್ರಾಮ ಪಂಚಾಯಿತಿ ಸದಸ್ಯೆ ಅಸೀನಬಾನು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.