ಬುಧವಾರ, ಮೇ 12, 2021
18 °C

ಅಂಬೇಡ್ಕರ್ ಸಮಾನತೆಯ ಬದುಕಿನ ಆಶಾಕಿರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹರಪನಹಳ್ಳಿ:  ಶೋಷಣೆ, ದೌರ್ಜನ್ಯಗಳ ನೋವುಂಡು, ತುಳಿತಕ್ಕೊಳಗಾದ ನಿಮ್ನ ವರ್ಗಗಳಲ್ಲಿ ಸಮಾನತೆ ಹಾಗೂ ಸಾಮಾಜಿಕ ಸಾಮರಸ್ಯದ ಬದುಕಿನಲ್ಲಿ ಬದಲಾವಣೆ ಕ್ರಾಂತಿಯ ಕಹಳೆ ಮೊಳಗಿಸಿದ ಮಹಾನ್ ಮಾನವತಾವಾದಿ ಡಾ.ಬಿ.ಆರ್. ಅಂಬೇಡ್ಕರ್ ಎಂದು ಶಾಸಕ ಜಿ. ಕರುಣಾಕರರೆಡ್ಡಿ ಬಣ್ಣಿಸಿದರು.ಶನಿವಾರ ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 121ನೇ ಹಾಗೂ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 105ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಸಾಮಾಜಿಕ ನ್ಯಾಯವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾವು ಶಾಸಕರಾಗಿ ಆಯ್ಕೆಯಾದ ಬಳಿಕ ಸರ್ಕಾರದ ವಿವಿಧ ಯೋಜನೆಗಳ ಅಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮುದಾಯಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಬಲೀಕರಣಕ್ಕಾಗಿ ರೂ11.80ಕೋಟಿ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

 

ಪಟ್ಟಣದಲ್ಲಿ ರೂ 1ಕೋಟಿ ವೆಚ್ಚದಲ್ಲಿ ಸುಸಜ್ಜಿತವಾದ `ಡಾ.ಬಿ.ಆರ್. ಅಂಬೇಡ್ಕರ್ ಭವನ~ ನಿರ್ಮಾಣಕ್ಕಾಗಿ ಈಗಾಗಲೇ ಒಂದು ಎಕರೆ ಜಮೀನು ಖರೀದಿಸಲಾಗಿದೆ. ಶೀಘ್ರದಲ್ಲಿಯೇ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸುವುದಾಗಿ ಭರವಸೆ ನೀಡಿದರು.ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ವಿವಿಧ ಯೋಜನೆಗಳ ಅಡಿಯಲ್ಲಿ ಅರ್ಹ ಪರಿಶಿಷ್ಟ ಫಲಾನುಭವಿಗಳಿಗೆ ಸೌಲಭ್ಯ ಹಾಗೂ ಪರಿಕರಗಳನ್ನು ಶಾಸಕರು ವಿತರಿಸಿದರು.

ದಾವಣಗೆರೆ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕ ಡಾ.ಪಾಪಣ್ಣ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಮುಖಂಡ ಎಚ್. ಶಂಭುಲಿಂಗಪ್ಪ ಉಭಯ ನಾಯಕರ ಕುರಿತು ವಿಶೇಷ ಉಪನ್ಯಾಸ ಮಂಡಿಸಿದರು.ತಾ.ಪಂ. ಅಧ್ಯಕ್ಷೆ ಗೀತಾಬಾಯಿ, ಪುರಸಭಾ ಅಧ್ಯಕ್ಷ ಬಿ. ಮಹಬೂಬ್ ಸಾಹೇಬ್, ಡಿವೈಎಸ್‌ಪಿ ಎಚ್.ಆರ್. ರಾಧಾಮಣಿ, ತಹಶೀಲ್ದಾರ್ ಡಾ.ಸಿ.ವೆಂಕಟೇಶಮೂರ್ತಿ, ಜಿ.ಪಂ. ಸದಸ್ಯರಾದ ಮಂಜುಳಾ, ಕವಿತಾ, ತಾ.ಪಂ. ಇಒ ಟಿ. ಪಾಂಡ್ಯಪ್ಪ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಸಿ. ತಿಪ್ಪೇಸ್ವಾಮಿ, ದಲಿತ ಸಂಘಟನೆಗಳ ಮುಖಂಡರಾದ ನಿಚ್ಚವ್ವನಹಳ್ಳಿ ಭೀಮಪ್ಪ, ಮಂಜುನಾಥ, ಡಾ.ಹನುಮಂತಯ್ಯ ಇತರರು ಉಪಸ್ಥಿತರಿದ್ದರು.   ಶಿಕ್ಷಣ ಪಡೆದು ಮುಂದೆ ಬನ್ನಿಮಲೇಬೆನ್ನೂರು: ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷ ಕಳೆದರೂ ಪರಿಶಿಷ್ಟ ಜಾತಿ, ವರ್ಗ ಹಾಗೂ ದಲಿತರ ಕಲ್ಯಾಣಕ್ಕೆ  ರೂಪಿಸಿದ ಹಲವಾರು ಯೋಜನೆ ಕಟ್ಟಕಡೆ ವ್ಯಕ್ತಿಗೆ ತಲುಪದಿರುವುದು ನೋವಿನ ಸಂಗತಿ ಎಂದು ಶಾಸಕ ಬಿ.ಪಿ. ಹರೀಶ್ ಆತಂಕ ವ್ಯಕ್ತಪಡಿಸಿದರು.ಇಲ್ಲಿನ ಅಂಬೇಡ್ಕರ್ ಸಭಾಭವನದಲ್ಲಿ ಶನಿವಾರ ಗ್ರಾಮಾಂತರ ಬಿಜೆಪಿ ಪರಿಶಿಷ್ಟ ಮೋರ್ಚಾ ವತಿಯಿಂದ ಹಮ್ಮಿಕೊಂಡಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 121ನೇ ಜನ್ಮದಿನದ ಸಭೆ ಉದ್ದೇಶಿಸಿ ಮಾತನಾಡಿದರು.ತಾ.ಪಂ. ಸದಸ್ಯ ಐರಣಿ ಅಣ್ಣೇಶ್ ಮಾತನಾಡಿ, ಸ್ವಾಭಿಮಾನ ಬೆಳೆಸಿಕೊಂಡು ಮುಂದೆ ಬನ್ನಿ ಎಂದು ಸಲಹೆ ನೀಡಿದರು.ಗ್ರಾ.ಪಂ ಸದಸ್ಯ ಕೆ.ಜಿ. ಮಂಜುನಾಥ್ ಅವರು, ಈಗಾಗಲೇ ಮೀಸಲಾತಿ ಇನ್ನಿತರ ಸರ್ಕಾರಿ ಸೌಲಭ್ಯ ಪಡೆದವರು, ಬೇರೆಯವರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದರು.ಭಾನುವಳ್ಳಿ ಜಿ.ಪಂ. ಸದಸ್ಯ ಸಿ.ಎನ್. ವೀರಭದ್ರಪ್ಪ, ಗ್ರಾ.ಪಂ. ಅಧ್ಯಕ್ಷೆ ಸುನಿತಾ ಮಾತನಾಡಿದರು. ಗ್ರಾಮಾಂತರ ಬಿಜೆಪಿ ಪರಿಶಿಷ್ಟ ಮೋರ್ಚಾ ಅಧ್ಯಕ್ಷ  ಹಾಗೂ ಗ್ರಾ.ಪಂ. ಸದಸ್ಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಂತರ ಬಿಜೆಪಿ ವಿಭಾಗದ ಅಧ್ಯಕ್ಷ ಹಿಂಡಸಗಟ್ಟೆ ಮೃತ್ಯುಂಜಯಸ್ವಾಮಿ, ದಲಿತ ರಕ್ಷಣ ವೇದಿಕೆ ಜಿಲ್ಲಾಧ್ಯಕ್ಷ ನಾಗರಾಜ್ ಪಾಳೇಗಾರ್, ಮಜೀದ್‌ಸಾಬ್, ಜಿಗಳಿ ಚಂದ್ರಪ್ಪ, ಹನುಮಗೌಡ, ಬೀರಪ್ಪ, ಗಂಗಾಧರ್, ಶೇಖರಪ್ಪ. ಬಿಳಸನೂರ ಮಹೇಶ್, ಜಯಣ್ಣ, ಅಲ್ಲಾಭಕ್ಷ ಇತರರು ಉಪಸ್ಥಿತರಿದ್ದರು. ದೇವರಬೆಳೆಕೆರೆ ಗ್ರಾ.ಪಂ. ಉಪಾಧ್ಯಕ್ಷ ಭದ್ರೇಶ್ ಸ್ವಾಗತಿಸಿ, ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.