ಭಾನುವಾರ, ಮೇ 16, 2021
27 °C
ತಾಲ್ಲೂಕು ಪಂಚಾಯಿತಿ ಸಭೆಯಲ್ಲಿ ಶಾಸಕಿ ಶಾರದಾ ಪೂರ‌್ಯಾನಾಯ್ಕ ಸೂಚನೆ

ಅಕ್ಕಿ ಸಾಗಣೆ; ಆರೋಪಿಗಳ ಪತ್ತೆ ಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: `ಅಕ್ರಮವಾಗಿ ಅಕ್ಕಿ ಸಾಗಣೆ ಮಾಡಿದ ಪ್ರಕರಣದಲ್ಲಿ ನಿಜವಾದ ಆರೋಪಿಗಳ ಪತ್ತೆ ಹಚ್ಚಿ, ಸೂಕ್ತ ಕ್ರಮ ಕೈಗೊಳ್ಳಿ' ಎಂದು ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.ನಗರದ ಶಿವಮೊಗ್ಗ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಪಂಚಾಯ್ತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅಕ್ಕಿ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ತನಿಖೆ ನಡೆಸಿದ್ದು, ಯಾವುದೇ ಸತ್ಯಾಂಶ ಕಂಡುಬಂದಿಲ್ಲ. ಅಕ್ಕಿಯು ಹಾಸ್ಟೆಲ್‌ಗೆ ಸೇರಿದ್ದಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಆದರೆ ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಯಾವ ಹಂತ ದಲ್ಲಿದೆ ಎಂಬ ವಿವರ ನೀಡುವಂತೆ ಸಭೆಯಲ್ಲಿದ್ದ ಡಿವೈಎಸ್‌ಪಿ ರಾಮಾನಾಯ್ಕ ಅವರಿಗೆ ಶಾಸಕಿ ಸೂಚಿಸಿದರು.ಜಿಲ್ಲಾ ಪಂಚಾಯಿತಿ ಸದಸ್ಯ ಕೃಷ್ಣೇಗೌಡ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಅಕ್ರಮ ನಡೆದಿಲ್ಲ ಎನ್ನುವುದಾದರೇ ಅಕ್ಕಿ ಸಾಗಣೆ ಆರೋಪದ ಕುರಿತಾಗಿ ಅಧಿಕಾರಿಯೊಬ್ಬರನ್ನು ಅಮಾನತ್ತು ಮಾಡಿದ್ದು ಏಕೆ? ಏಳು ತಿಂಗಳಿನಿಂದ ವಿಚಾರಣೆ ನಡೆಯುತ್ತಿದೆ ಎಂದರೇ ಏನರ್ಥ ಎಂದು ಪ್ರಶ್ನಿಸಿದರು.ಗ್ರಾಮೀಣ ಪ್ರದೇಶದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ತೀವ್ರ ತೊಂದರೆ ಪಡುವಂತಾಗಿದೆ ಎಂದು ಆರೋಪಿಸಿದ ಜಿ.ಪಂ. ಸದಸ್ಯ ಕೆ.ಬಿ.ಅಶೋಕ್‌ನಾಯ್ಕ, ಪಡಿತರ ಚೀಟಿ ನೋಂದಾವಣೆಗೆ ಏಜೆನ್ಸಿಗಳಿಗೆ ಅವಕಾಶ ನೀಡಬೇಕು. ತುರ್ತುಗತಿಯಲ್ಲಿ ಪಡಿತರ ಚೀಟಿ ನೊಂದಾವಣೆಗೆ ಕ್ರಮಕೈಗೊಳ್ಳಬೇಕು ಎಂದು ಸಲಹೆ ಮಾಡಿದರು.ಶಾಶ್ವತ ಪಡಿತರ ಚೀಟಿ ಇದ್ದವರಿಗೆ ಮಾತ್ರ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ ಮಾಡುವಂತೆ ಸರ್ಕಾರದ ಆದೇಶ ಬಂದಿದೆ. ಆದೇಶದಂತೆ ಅರ್ಹ ಫಲಾನುಭವಿಗಳಿಗೆ ಬಾಂಡ್ ವಿತರಣೆ ಮಾಡಲಾಗಿದೆ ಎಂದು ಸಿಡಿಪಿಒ ಮಾಹಿತಿ ನೀಡಿದರು.ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದೇವಿಬಾಯಿ ಧರ್ಮಾನಾಯ್ಕ ಮತ್ತು ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.