ಸೋಮವಾರ, ಆಗಸ್ಟ್ 2, 2021
21 °C

ಅಕ್ರಮ ಆಸ್ತಿ : ಅಮಾನತು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಯಿಂದ ಅಮಾನತುಗೊಂಡಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ  ನರೇಂದ್ರ ಹಿತ್ತಲಮಕ್ಕಿ ಅವರು ಅಮಾನತು ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದಾರೆ.ಲೋಕಾಯುಕ್ತ ಪೊಲೀಸರು 2010ರ ಜೂನ್ 26ರಂದು ಇವರ ಮನೆಯ ಮೇಲೆ ದಾಳಿ ನಡೆಸಿದ್ದರು. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಮಾಡಿರುವುದಾಗಿ ಅವರು ವರದಿ ನೀಡಿದ್ದರು. ಇದರ ಆಧಾರದ ಮೇಲೆ ಇವರನ್ನು ಕಳೆದ ಏಪ್ರಿಲ್ 2ರಿಂದ ಅಮಾನತು ಮಾಡಲಾಗಿದೆ.ಇದನ್ನು ಪ್ರಶ್ನಿಸಿ ಅವರು ಕರ್ನಾಟಕ  ಆಡಳಿತ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಆದರೆ ಇವರ ವಾದವನ್ನು ಕೆಎಟಿ ಏ.20ರಂದು ಮಾನ್ಯ ಮಾಡಲಿಲ್ಲ. ಈ ಆದೇಶವನ್ನು ಅವರು ಈಗ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.ವಿವಾದಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕಾರ್ಯದರ್ಶಿ, ಲೋಕಾಯುಕ್ತ ಎಡಿಜಿಪಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೇರಿದಂತೆ ಇತರ ಪ್ರತಿವಾದಿಗಳಿಗೆ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಹಾಗೂ ಬಿ.ಮನೋಹರ ಅವರನ್ನು ಒಳಗೊಂಡ ವಿಭಾಗೀಯ ಪೀಠ ಮಂಗಳವಾರ ನೋಟಿಸ್ ಜಾರಿಗೆ ಆದೇಶಿಸಿದೆ.ಬೇಲೆಕೇರಿ ಬಂದಿರಿನಲ್ಲಿ ನಾಪತ್ತೆಯಾದ ಐದು ಲಕ್ಷ ಟನ್ ಅದಿರಿನ ಬಗ್ಗೆ ತಾವು ದೂರು ದಾಖಲು ಮಾಡಿದ್ದ ಹಿನ್ನೆಲೆಯಲ್ಲಿ, ಪಟ್ಟಭದ್ರ ಹಿತಾಸಕ್ತಿಗಳು ದುರುದ್ದೇಶದಿಂದ ತಮ್ಮ ವಿರುದ್ಧ ಸಂಚು ಹೂಡಿದ್ದಾರೆ.ಲೋಕಾಯುಕ್ತ ಪೊಲೀಸರು ತಮ್ಮ ಮನೆಯ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಯಾವುದೇ ಪುರಾವೆ ಸಿಗಲಿಲ್ಲ.ಆದರೂ ತಮ್ಮ ವಿರುದ್ಧ ವಿನಾಕಾರಣ ಆರೋಪ ಹೊರಿಸಲಾಗಿದೆ ಎನ್ನುವುದು ಅವರ ವಾದ. ವಿಚಾರಣೆಯನ್ನು ಮುಂದೂಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.