ಅಕ್ರಮ ಆಸ್ತಿ: ರೋಷನ್ ಬೇಗ್ ವಿರುದ್ಧ ಎಫ್‌ಐಆರ್

ಸೋಮವಾರ, ಮೇ 20, 2019
33 °C

ಅಕ್ರಮ ಆಸ್ತಿ: ರೋಷನ್ ಬೇಗ್ ವಿರುದ್ಧ ಎಫ್‌ಐಆರ್

Published:
Updated:

ಬೆಂಗಳೂರು: ಅಕ್ರಮ ಆಸ್ತಿ ಹೊಂದಿರುವುದು ಮತ್ತು ಸರ್ಕಾರಕ್ಕೆ ವಂಚಿಸಿರುವ ಆರೋಪದ ಮೇಲೆ ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆರ್. ರೋಷನ್ ಬೇಗ್, ಅವರ ಪತ್ನಿ ಸಬೀಹಾ ರೋಷನ್ ಮತ್ತು ಪುತ್ರ ರುಮಾನ್ ಬೇಗ್ ರೆಹಮಾನ್ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.ರೋಷನ್ ಬೇಗ್ ಮತ್ತು ಅವರ ಕುಟುಂಬದ ಸದಸ್ಯರು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿ ಶಿವಾಜಿನಗರ ನಿವಾಸಿ ಅಬ್ದುಲ್ ಹಖ್ ಸುರಥಿ ಎಂಬುವರು ಜೂನ್ 14ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿರುವ ಆರೋಪಗಳ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಜೂನ್ 18ರಂದು ಆದೇಶ ಹೊರಡಿಸಿದ್ದರು.ನ್ಯಾಯಾಲಯದ ಆದೇಶದ ಪ್ರತಿ ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರನ್ನು ತಲುಪಿತು. ಅದರಂತೆ ಬೆಂಗಳೂರು ನಗರ ಲೋಕಾಯುಕ್ತ ಎಸ್‌ಪಿ ಪಿ.ಕೆ.ಶಿವಶಂಕರ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಎಚ್.ಎಸ್.ಮಂಜುನಾಥ್ ಎಫ್‌ಐಆರ್ ದಾಖಲಿಸಿ, ತನಿಖೆ ಆರಂಭಿಸಿದ್ದಾರೆ ಎಂದು ಲೋಕಾಯುಕ್ತದ ಉನ್ನತ ಮೂಲಗಳು ತಿಳಿಸಿವೆ.ಬೇಗ್ ಅವರ ಕುಟುಂಬದ ಸದಸ್ಯರ ಒಡೆತನದ ಡ್ಯಾನಿಷ್ ಪಬ್ಲಿಕೇಷನ್ಸ್ ಪ್ರೈವೇಟ್ ಲಿಮಿಟೆಡ್, ರುಮಾನ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸಬೀಹಾ ಅಪಾರೆಲ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮದ ದೈತ್ಯ ಸಂಸ್ಥೆ ಪ್ರೆಸ್ಟೀಜ್ ಎಸ್ಟೇಟ್ಸ್ ಹೆಸರನ್ನೂ ಆರೋಪಿಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.ಆರೋಪ ಏನಿದೆ?: `ರೋಷನ್ ಬೇಗ್ ಅವರು ಚುನಾವಣಾ ಆಯೋಗ ಮತ್ತು ಲೋಕಾಯುಕ್ತರಿಗೆ ಸಲ್ಲಿಸಿರುವ ಆಸ್ತಿ ವಿವರ ಹಾಗೂ ಅವರು ಹೊಂದಿರುವ ಆಸ್ತಿಯ ಮೌಲ್ಯದ ನಡುವೆ 100 ಕೋಟಿ ರೂಪಾಯಿ ವ್ಯತ್ಯಾಸವಿದೆ.ಉದ್ಯಮ ಸ್ಥಾಪಿಸುವುದಕ್ಕಾಗಿ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದಿಂದ (ಕಿಯೋನಿಕ್ಸ್) ಬೇಗೂರಿನಲ್ಲಿ ಭೂಮಿ ಪಡೆದಿದ್ದ ಶಾಸಕರು, ಅದನ್ನು ರಿಯಲ್ ಎಸ್ಟೇಟ್‌ಗೆ ಬಳಸಿದ್ದಾರೆ. ಪ್ರೆಸ್ಟೀಜ್ ಎಸ್ಟೇಟ್ಸ್ ಜೊತೆ ಜಂಟಿ ಪಾಲುದಾರಿಕೆ ಒಪ್ಪಂದದಲ್ಲಿ ವಾಣಿಜ್ಯ ಬಳಕೆ ಕಟ್ಟಡ ನಿರ್ಮಿಸಿದ್ದಾರೆ. ಇದರಿಂದ ವಾರ್ಷಿಕ 2.5 ಕೋಟಿ ರೂಪಾಯಿ ಬಾಡಿಗೆ ಪಡೆಯುತ್ತಿದ್ದಾರೆ~ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry