ಭಾನುವಾರ, ಜೂನ್ 13, 2021
25 °C

ಅಕ್ರಮ ಆಸ್ತಿ: ವಿವರ ಪಡೆಯಲು ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಗಾಲಿ ಜನಾರ್ದನ ರೆಡ್ಡಿ ಅವರು ಶಾಮೀಲಾಗಿರುವ ಅಕ್ರಮ ಗಣಿಗಾರಿಕೆ ಹಾಗೂ ಎಮಾರ್ ಹಗರಣಕ್ಕೆ ಸಂಬಂಧಿಸಿದ ಎಫ್‌ಐಆರ್, ದೋಷಾರೋಪ ಮತ್ತಿತರ ದಾಖಲೆಗಳ ಪ್ರಮಾಣೀಕೃತ ಪ್ರತಿಗಳನ್ನು ಪಡೆದುಕೊಳ್ಳಲು ಶುಕ್ರವಾರ ಜಾರಿ ನಿರ್ದೇಶನಾಲಯಕ್ಕೆ  ಸಿಬಿಐ ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.ಈಗಾಗಲೇ ಬಂಧನದಲ್ಲಿರುವ ರೆಡ್ಡಿ ಈ ಮೂಲಕ ಮತ್ತಷ್ಟು ತೊಂದರೆಗೆ ಸಿಲುಕಿಕೊಳ್ಳುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಧೀಶ ಬಿ.ನಾಗ ಮಾರುತಿ ಶರ್ಮ ಅವರ ಹೇಳಿಕೆಗಳ ದಾಖಲೆ, ದೋಷಾರೋಪ, ಎಫ್‌ಐಆರ್ ಪ್ರತಿ ನೀಡುವಂತೆ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ಕಶ್ಯಪ್ ಕೋರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.