ಮಂಗಳವಾರ, ಮೇ 24, 2022
30 °C

ಅಕ್ರಮ ಕಟ್ಟಡ ನೆಲಸಮ: 43 ಎಕರೆ ಬಿಡಿಎ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಗಿಡದಕೋನೇನಹಳ್ಳಿ ಗ್ರಾಮದ ಬಳಿಯ ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ಸೋಮವಾರ ತೆರವುಗೊಳಿಸಿದ ಬಿಡಿಎ ಸಿಬ್ಬಂದಿ ಸುಮಾರು 150 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡರು. ವಿಶ್ವೇಶ್ವರಯ್ಯ ಬಡಾವಣೆಯ ಏಳು ಮತ್ತು ಎಂಟನೇ ಬ್ಲಾಕ್‌ಗಳ ನಿರ್ಮಾಣಕ್ಕಾಗಿ ಬಿಡಿಎ ಈ ಹಿಂದೆ ಗಿಡದಕೋನೇನಹಳ್ಳಿ ಗ್ರಾಮದ ಸರ್ವೆ ನಂ.38 ಮತ್ತು 39ರಲ್ಲಿ ಸುಮಾರು 43.14 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು.ಅಲ್ಲದೇ ಆ ಜಾಗದಲ್ಲಿ ನಿವೇಶನಗಳನ್ನು ಮಾಡಿ 2003-04ರಲ್ಲಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿತ್ತು ಎಂದು ಬಿಡಿಎ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಆ ಜಾಗದಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದರು. ಆದ್ದರಿಂದ ಆ ಶೆಡ್‌ಗಳನ್ನು ತೆರವುಗೊಳಿಸಿ 43.14 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.