ಶುಕ್ರವಾರ, ಮೇ 7, 2021
25 °C

ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು ಉತ್ತರ ತಾಲ್ಲೂಕಿನ ಜಾಲಾ ಹೋಬಳಿಯ ಬೈಯಪ್ಪನಹಳ್ಳಿ ಗ್ರಾಮಕ್ಕೆ ಸೇರಿದ ಸರ್ಕಾರಿ (ಸರ್ವೆ ನಂ. 80ರ) ಗೋಮಾಳದ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಈ ಭೂಮಿ ಹಸಿರು ಪಟ್ಟಿ ವಲಯದಲ್ಲಿದೆ. ಗಣಿಗಾರಿಕೆಗೆ ಸ್ಫೋಟಕಗಳನ್ನು ಬಳಸುವುದರಿಂದ ಸಮೀಪದ ಬಡವರ ಮತ್ತು ಪರಿಶಿಷ್ಟ ಜನಾಂಗದವರ  ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ.  ಜಾನುವಾರುಗಳಿಗೂ ತೊಂದರೆಯಾಗುತ್ತಿದೆ. ವ್ಯವಸಾಯಕ್ಕೂ ತೊಂದರೆಯಾಗಿದೆ.ಈ ತೊಂದರೆಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮುಖ್ಯಸ್ಥರಿಗೆ  ಮತ್ತು ಕಂದಾಯ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.ಗಣಿಗಾರಿಕೆ ನಡೆಯುವ ಸ್ಥಳದ ಸಮೀಪದಲ್ಲೇ ಇರುವ ಪುರಾತನ ಕಾಲದ ಕೋಟೆ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತೊಂದರೆಯಾಗುತ್ತಿದೆ. ಗಣಿಗಾರಿಕೆಯನ್ನು ಕೂಡಲೇ  ನಿಲ್ಲಿಸಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.