ಅಕ್ರಮ ಗಣಿಗಾರಿಕೆ:ತನಿಖೆ ಆರಂಭ

7

ಅಕ್ರಮ ಗಣಿಗಾರಿಕೆ:ತನಿಖೆ ಆರಂಭ

Published:
Updated:

ಆನೇಕಲ್: ಅಕ್ರಮ ಗಣಿಗಾರಿಕೆ ಕುರಿತಂತೆ ಇಲಾಖಾ ತನಿಖೆ ಆರಂಭಿಸಲಾಗಿದೆ. ಇನ್ನು 15 ದಿನಗಳಲ್ಲಿ ವರದಿ ಕೈಸೇರಲಿದ್ದು, ಇದನ್ನು ಆಧರಿಸಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ ಸಚಿವ ಸಿ.ಪಿ.ಯೋಗೇಶ್ವರ್ ನುಡಿದರು.ಅವರು ಭಾನುವಾರ ತಾಲ್ಲೂಕಿನ ಬನ್ನೇರುಘಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇದು ಇಲಾಖೆಯ ತನಿಖೆ. ಇದರಲ್ಲಿ ಯಾವುದೇ ವೈಯುಕ್ತಿಕ ಹಿತಾಸಕ್ತಿಗಳಿಲ್ಲ. ಅರಣ್ಯ ಸಚಿವನಾಗಿ ಅಕ್ರಮ ಗಣಿಗಾರಿಕೆಯನ್ನು ತಡೆಯುವುದು ನನ್ನ ಜವಾಬ್ದಾರಿಯಾಗಿದೆ ಎಂದು ಹೇಳಿದರು.ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನನ್ನ ವಿರುದ್ಧ ಗಣಿಗಾರಿಕೆಗೆ ಸಂಬಂಧಪಡದ ಕೆಲ ಆರೋಪಗಳನ್ನು ಮಾಡುತ್ತಿದ್ದಾರೆ. ತನಿಖೆಯ ಜಾಡುತಪ್ಪಿಸಲು ಹಾಗೂ ವಿಷಯಾಂತರ ಮಾಡುವುದು ಅವರ ಉದ್ದೇಶವಾಗಿದೆ. ಈ ಆರೋಪಗಳಿಗೂ ನನಗೂ ಸಂಬಂಧವಿಲ್ಲ ಎಂದು ಅವರು ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry