ಮಂಗಳವಾರ, ಜನವರಿ 21, 2020
18 °C

ಅಕ್ರಮ ಗಣಿಗಾರಿಕೆ: ಕೃಷ್ಣ ಸುಪ್ರೀಂಕೋರ್ಟ್‌ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ, (ಪಿಟಿಐ): ಕರ್ನಾಟಕದಲ್ಲಿ ತಾವು ಮುಖ್ಯಮಂತ್ರಿಯಾಗಿದ್ದಾಗ (1999-2004) ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಖಾಸಗಿ ದೂರು ಹಾಗೂ ಲೋಕಾಯುಕ್ತ ತನಿಖೆಯನ್ನು ರದ್ದುಗೊಳಿಸುವಂತೆ ಕೋರಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಮಂಗಳವಾಎರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

 

ಈ ಸಂಬಂಧ ಅವರು ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮಾನ್ಯ ಮಾಡದೆ ಇದೇ 20ರಂದು ನೀಡಿದ ಆದೇಶವನ್ನು ಪ್ರಶ್ನಿಸಿ ಕೃಷ್ಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ಪ್ರತಿಕ್ರಿಯಿಸಿ (+)