ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅರಣ್ಯ ಪ್ರದೇಶ ದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಬಗೆಗೆ ತನಿಖೆ ನಡೆಸಿ, ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ. ಅಮರ್ ನಾರಾಯಣ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಶನಿವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.ಮಳವಳ್ಳಿ ತಾಲ್ಲೂಕಿನ ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಆದರೆ, ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ಅಧಿಕಾರಿಗಳು ಕಳ್ಳರನ್ನು ಬೆಂಬಲಿಸುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಲೂಟಿ ನಡೆದಿದೆ ಎಂದು ಆರೋಪಿಸಿದರು.

ಮಹಾರಾಜರು ನೀಡಿದ ಜಮೀನಿನಲ್ಲಿ ಉಳುಮೆ ಮಾಡಿಕೊಂಡಿರುವ ರೈತರು ಕಂದಾಯ ಕಟ್ಟುತ್ತಿದ್ದಾರೆ. ಅವರನ್ನು ಒಕ್ಕಲೆಬ್ಬಿ ಸುವ ಪ್ರಯತ್ನ ನಡೆದಿದೆ. ಆದರೆ, ಅಕ್ರಮ ಗಣಿ ಗಾರಿಕೆ ಮಾಡುತ್ತಿರುವವರ ಬಗೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಟೀಕಿಸಿದರು.

ತಾಲ್ಲೂಕಿನ ಅವರೆಹಳ್ಳಿಯ ಕೆರೆ ಹೂಳೆತ್ತಲು ಎರಡು ವರ್ಷದ ಹಿಂದೆಯೇ ಟೆಂಡರ್ ಕರೆಯಲಾಗಿದೆ. ಅರಣ್ಯ ಇಲಾಖೆಯವರು ಅಲ್ಲಿರುವ ಗಿಡಗಳನ್ನು ಕಡಿಯಲು ಅನುಮತಿ ನೀಡದ್ದರಿಂದ ವಿಳಂಬವಾಗಿದೆ. ಈ ಕುರಿತು ಎಸಿಎಫ್ ರಾಮಲಿಂಗೇಗೌಡರಿಗೆ ದೂರವಾಣಿ ಕರೆ ಮಾಡಿದರೆ ಸ್ಪಂದಿಸುವುದಿಲ್ಲ ಎಂದು ದೂರಿದರು.
ಆನೆ ಹಾವಳಿಯಿಂದ ಬೆಳೆ ನಷ್ಟಕ್ಕೆ ಒಳ

ಗಾ ದವರಿಗೂ ಸರಿಯಾಗಿ ಪರಿಹಾರ ನೀಡಿಲ್ಲ. ಉಡಾಫೆ ಉತ್ತರ ನೀಡುತ್ತಾರೆ ಎಂದು ಟೀಕಿಸಿದರು.
ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಮಾತನಾಡಿ, ಜನಪ್ರತಿನಿಧಿಗಳ ಕರೆಗೆ ಸ್ಪಂದಿಸ ಬೇಕು. ಸಭೆಯಲ್ಲಿದ್ದರೆ, ನಂತರ ಕರೆ ಮಾಡಬೇಕು. ಅವರು ಕೇಳಿದ ಮಾಹಿತಿ ಯನ್ನು ನೀಡುವ ಸೌಜನ್ಯ ಬೆಳೆಸಿಕೊಳ್ಳಬೇಕು ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮರ್ ನಾರಾಯಣ ಮಾತನಾಡಿ, ಅಧಿಕಾರಿಗಳು ಸಭೆಗೆ ಬರುವಾಗ ಸಿದ್ಧತೆಯೊಂದಿಗೆ ಬನ್ನಿ ಎಂದರು.ಸಭೆಯಿಂದ ತೆರಳುವ ಮುನ್ನ ಇದಕ್ಕೂ ಮೊದಲು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ. ಯೋಗೇಶ್ವರ್ ಮಾತನಾಡಿ, ಮಳೆ ಅವಲಂಬಿಸಿರುವ ಕೆ.ಆರ್. ಪೇಟೆ, ಮಳವಳ್ಳಿ ಹಾಗೂ ಮದ್ದೂರು ತಾಲ್ಲೂಕಿನ ಕೆರೆಗಳಿಗೆ ಮೂರು ತಿಂಗಳ ಹಿಂದೆಯೇ ನೀರು ತುಂಬಿಸು ವಂತೆ ಸೂಚಿಸಲಾಗಿತ್ತು. ಇಂದಿಗೂ ಭರ್ತಿ ಮಾಡದ ಬಗೆಗೆ ತರಾಟೆಗೆ ತೆಗೆದುಕೊಂಡರು.

ಮುಂಬರುವ ಬೇಸಿಗೆಯಲ್ಲಿ ಕುಡಿಯವ ನೀರಿಗೆ ತೊಂದರೆಯಾಗದಂತೆ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಕೂಡಲೇ ಮಾಡಬೇಕು ಎಂದು ಸೂಚಿಸಿದರು.ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಡಾ. ಶಂಕರೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶ ಗಳಲ್ಲಿ ಸುಟ್ಟ ವಿದ್ಯುತ್ ಪರಿವರ್ತಕಗಳನ್ನು ಸರಿಯಾಗಿ ಬದಲಾವಣೆ ಮಾಡದ್ದರಿಂದಾಗಿ ಕುಡಿಯುವ ನೀರಿಗೂ ತೊಂದರೆ ಎದುರಿಸು ವಂತಾಗಿದೆ. ಕೂಡಲೇ ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದರು.

ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಬಗೆಗೆ ಚರ್ಚೆ ನಡೆಯಿತು. ಶಾಸಕ ಬಿ.ರಾಮಕೃಷ್ಣ, ಎಂ. ಶ್ರೀನಿವಾಸ್, ಜಿ.ಪಂ. ಅಧ್ಯಕ್ಷೆ ನಾಗರತ್ನ ಬಸವ ರಾಜು, ಜಿ.ಪಂ. ಸಿಇಒ ಪಿ.ಸಿ. ಜಯಣ್ಣ ಇದ್ದರು.

`ಜಿಲ್ಲಾ ಕೇಂದ್ರದಲ್ಲೇ ಅಧಿಕಾರಿಗಳ ವಾಸ್ತವ್ಯ ಕಡ್ಡಾಯ~
ಮಂಡ್ಯ: ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಜಿಲ್ಲಾ ಕೇಂದ್ರಗಳಲ್ಲಿಯೇ ಕಡ್ಡಾಯವಾಗಿ ವಾಸಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ. ಅಮರ್ ನಾರಾಯಣ ಸೂಚಿಸಿದರು.

ನಗರದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಯಾಣದಲ್ಲಿಯೇ ಕಾಲ ಕಳೆದರೆ ಕೆಲಸ ಮಾಡುವುದು ಯಾವಾಗ ಎಂದರು.

ದಯಮಾಡಿ ಬೇರೆ ಕಡೆಗಳಲ್ಲಿ ಮನೆ ಮಾಡುವುದನ್ನು ನಿಲ್ಲಿಸಬೇಕು. ಜಿಲ್ಲೆಯಿಂದ ಹೊರಗಡೆ ಪ್ರಯಾಣಿಸ ಬೇಕಾದರೆ, ಇಲಾಖಾ ಮುಖ್ಯಸ್ಥರ ಪೂರ್ವಾನುಮತಿ ಪಡೆದು ಕೊಂಡು ಹೋಗಬೇಕು ಎಂದು ಸೂಚಿಸಿದರು.
ಸಭೆಗೂ ಸೂಕ್ತ ಸಿದ್ಧತೆಯೊಂದಿಗೆ ಬರಬೇಕು. ಇಲಾಖೆಯ ಯೋಜನೆಗಳ ಬಗೆಗೆ ತಿಳಿದುಕೊಂಡಿ ರಬೇಕು. ಸೌಜನ್ಯದಿಂದ ವರ್ತಿಸ ಬೇಕು. ನಿಮ್ಮ ನಡವಳಿ ಕೆಯಿಂದಾಗಿ ನಾವು ಸಭೆಯಲ್ಲಿ ಭಾಗವಹಿಸಲು ಸಾಧ್ಯ ವಾಗುವು ದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಮಂಚೇಗೌಡ ಅವರು, ಜಿಲ್ಲಾ ಮಟ್ಟದ ಎಷ್ಟು ಮಂದಿ ಅಧಿಕಾರಿಗಳು ಜಿಲ್ಲಾ ಕೇಂದ್ರದಲ್ಲಿ ವಾಸಿಸುತ್ತಾರೆ ಎಂಬ ವಿಳಾಸ ಸಮೇತ ಮಾಹಿತಿ ನೀಡಬೇಕು ಎಂದರು.ಮುಂದಿನ ಸಭೆಯಲ್ಲಿ ಅಧಿಕಾರಿಗಳ ವಿಳಾಸ, ಸ್ಥಿರ ದೂರವಾಣಿ ಸಂಖ್ಯೆ ಸಮೇತ ಮಾಹಿತಿಯನ್ನು ನೀಡಲಾಗುವುದು ಎಂದು ಅಮರ್ ನಾರಾಯಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.