ಅಕ್ರಮ ಗಣಿಗಾರಿಕೆ: ಸಿಬಿಐ ತನಿಖೆಗೆ ಆಗ್ರಹ

ಸೋಮವಾರ, ಮೇ 20, 2019
32 °C

ಅಕ್ರಮ ಗಣಿಗಾರಿಕೆ: ಸಿಬಿಐ ತನಿಖೆಗೆ ಆಗ್ರಹ

Published:
Updated:

ಧಾರವಾಡ: ಅಕ್ರಮ ಗಣಿಗಾರಿಕೆ ಕುರಿತ ತನಿಖೆಯನ್ನು ಸುಪ್ರೀಂ ಕೋರ್ಟ್ ಮಾರ್ಗದರ್ಶನದಲ್ಲಿ ಸಿಬಿಐಗೆ ವಹಿಸುವಂತೆ ಜನ ಸಂಗ್ರಾಮ ಪರಿಷತ್ ಮುಖಂಡ ಎಸ್.ಆರ್.ಹಿರೇಮಠ ಆಗ್ರಹಿಸಿದರು.ನಗರದ ಮುರುಘಾಮಠದಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಜನಜಾಗೃತಿ ಕಾರ್ಯಕ್ರಮ `ಜನ ಸಂಗ್ರಾಮ~ದಲ್ಲಿ ಅವರು ಮಾತನಾಡಿದರು.ಗಣಿ ಅಕ್ರಮಗಳು ಗಂಭೀರ ಸ್ವರೂಪದಾಗಿದ್ದು, ಇದರ ತನಿಖೆಯನ್ನು ಸಿಬಿಐಗೆ ವಹಿಸುವುದು ಅಗತ್ಯವಾಗಿದೆ ಎಂದು ಅವರು ನುಡಿದರು.ನಿವೃತ್ತ ಲೋಕಾಯುಕ್ತ ಸಂತೋಷ ಹೆಗಡೆ ಅವರು ನೀಡಿದ ದ್ವಿತೀಯ ವರದಿಯಿಂದ ಇಡೀ ರಾಜ್ಯದ ರಾಜಕೀಯವೇ ಬುಡಮೇಲಾಗಿದೆ ಎಂದ ಅವರು, ಡಾ.ಯು.ವಿ. ಸಿಂಗ್ ವರದಿಯನ್ವಯ ಗಣಿ ಅಕ್ರಮದಲ್ಲಿ ಪಾಲ್ಗೊಂಡ ಜನಪ್ರತಿನಿಧಿಗಳು ಹಾಗೂ 700 ಅಧಿಕಾರಿಗಳಿಗೆ ಕಠಿಣ ಶಿಕ್ಷೆ  ನೀಡಬೇಕು. ಗಣಿ ಧಣಿಗಳ ಅಕ್ರಮ ಸಂಪತ್ತನ್ನು ಸರ್ಕಾರ ತನ್ನ ವಶಕ್ಕೆ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಮಾತನಾಡಿ, ಖನಿಜ ಸಂಪತ್ತು ಲೂಟಿ ಮಾಡುವ ವರಿಗೆ ತಕ್ಕ ಶಿಕ್ಷೆಯಾಗಬೇಕು. ಇಲ್ಲದಿದ್ದರೆ ಲೂಟಿ ನಿರಂತರ ಮುಂದು ವರಿಯುತ್ತದೆ ಎಂದರು.ಜನರು ಸಂಘಟನೆಗೊಂಡು ಹೋರಾಟಕ್ಕೆ ಇಳಿಯಬೇಕು ಎಂದು ಸಲಹೆ ನೀಡಿದರು. ಎಸ್.ಆರ್. ಹಿರೇಮಠ ನೇತೃತ್ವದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ನಡೆಯುತ್ತಿರುವ ಹೋರಾಟವನ್ನು ಶ್ಲಾಘಿಸಿದರು.ಡಿ.ಎಸ್.ಕಲ್ಮಠ, ಬಿ.ಎಂ.ಹನಸಿ, ಎಫ್.ಬಿ. ಹಬೀಬ, ಬಸವರಾಜ ಗೊಡಚಿ, ಗೌಸ್‌ಮೊದ್ದೀನ್ ಹಂಚಿನ ಮನಿ, ಎಂ.ಡಿ.ಪಾಟೀಲ, ಶ್ರೀಕಾಂತ ಹುಲಮನಿ, ಕಿರಣ ಹಿರೇಮಠ, ಈರಪ್ಪ ಪೂಜಾರ ಹಾಗೂ ಇತರರು ಶಿಬಿರದಲ್ಲಿ ಪಾಲ್ಗೊಂಡಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry