ಅಕ್ರಮ ಗಣಿಗಾರಿಕೆ ಹಗರಣ: ಯಡಿಯೂರಪ್ಪ ವಿರುದ್ಧ ಆರೋಪಪಟ್ಟಿ ದಾಖಲು

7

ಅಕ್ರಮ ಗಣಿಗಾರಿಕೆ ಹಗರಣ: ಯಡಿಯೂರಪ್ಪ ವಿರುದ್ಧ ಆರೋಪಪಟ್ಟಿ ದಾಖಲು

Published:
Updated:

ಬೆಂಗಳೂರು (ಪಿಟಿಐ): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಮಕ್ಕಳ ವಿರುದ್ಧ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮಂಗಳವಾರ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಮಕ್ಕಳಾದ ಬಿ.ವೈ. ವಿಜಯೇಂದ್ರ, ಬಿ.ವೈ. ರಾಘವೇಂದ್ರ ಅಳಿಯ ಸೋಹನ್ ಕುಮಾರ್, ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಸಿಬಿಐ ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಐಪಿಸಿ ಯ ಹಲವು ಸೆಕ್ಷನ್ ಗಳ ಅಡಿ ಆರೋಪಪಟ್ಟಿ ದಾಖಲಿಸಿತು.ಕಳೆದ ಮೇ ತಿಂಗಳಿನಲ್ಲಿ ಸುಪ್ರೀಂಕೋರ್ಟ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಇತರರ ವಿರುದ್ಧ ತನಿಖೆ ನಡೆಸುವಂತ ಸಿಬಿಐಗೆ ನಿರ್ದೆಶನ ನೀಡಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry