ಬಳ್ಳಾರಿ (ಪಿಟಿಐ): ರಾಜ್ಯದಲ್ಲೂ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಸುಪ್ರೀಂ ಕೋರ್ಟ್ ಗೆ ಶಿಫಾರಸು ಮಾಡಿದ್ದು, ಅದರಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದರೆ ತಾವು ಅದರ ಆದೇಶವನ್ನು ಪಾಲಿಸುವುದಾಗಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಶುಕ್ರವಾರ ಇಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಸಿಇಸಿ, ಬುಧವಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ತನ್ನ ವರದಿಯಲ್ಲಿ ಬಳ್ಳಾರಿಯಲ್ಲಿನ ಕಬ್ಬಿಣ ಅದಿರಿನ ಅಕ್ರಮ ಗಣಿಗಾರಿಕೆ ಕುರಿತಂತೆ ಸಿಬಿಐ ತನಿಖೆಗೆ ಆದೇಶಿಸುವಂತೆ ಶಿಫಾರಸು ಮಾಡಿತ್ತು.

ಈ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಸದಾನಂದಗೌಡ ಅವರು,ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಲಾಗುವುದು ಎಂದು ಗೌಡ ಅವರು ಹೇಳಿದ್ದಾರೆ.

ಇದಕ್ಕೂ ಮೊದಲು ಸದಾನಂದಗೌಡ ಅವರು, ಅಕ್ರಮ ಗಣಿಗಾರಿಕೆಯ ಬಗ್ಗೆ ಕರ್ನಾಟಕ ಲೋಕಾಯುಕ್ತರು ತನಿಖೆ ನಡೆಸಿರುವುದನ್ನು ಪ್ರಸ್ತಾಪಿಸಿ ಈ ಕುರಿತಂತೆ ಸಿಬಿಐ ತನಿಖೆ ನಡೆಸುವ ಸಾಧ್ಯತೆಯುನ್ನು ತಳ್ಳಿಹಾಕಿದ್ದರು.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಆಂಧ್ರ ಪ್ರದೇಶದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ. ತನಿಖೆ ಕೈಗೊಂಡಿದ್ದ ಸಿಬಿಐ ಅಕ್ರಮ ಕಬ್ಬಿಣ ಅದಿರಿನ ಗಣಿಗಾರಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮತ್ತು ಅವರ ಭಾವ ಶ್ರೀನಿವಾಸ ರೆಡ್ಡಿ ಅವರನ್ನು ಬಂಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.