ಭಾನುವಾರ, ಮೇ 31, 2020
27 °C

ಅಕ್ರಮ ಗಾಂಜಾ ಸಾಗಣೆ; ಮೂವರಿಗೆ 10 ವರ್ಷ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯವು 10 ವರ್ಷಗಳ ಶಿಕ್ಷೆ ಮತ್ತು ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.ಒಂದೂವರೆ ವರ್ಷದ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀನಿವಾಸ ಹರೀಶಕುಮಾರ ಆದೇಶ ಹೊರಡಿಸಿದ್ದಾರೆ.2009ರಲ್ಲಿ ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಟಾಟಾ ಇಂಡಿಕಾ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಸಂದರ್ಭದಲ್ಲಿ ಇಸ್ಲಾಂಪುರ ಗ್ರಾಮದ ಬಳಿ ಜನವಾಡ ಪೊಲೀಸ್‌ರು ನಾಲ್ವರನ್ನು ಬಂಧಿಸಿ 108 ಕೆ.ಜಿ ಗಾಂಜಾ ವಶಕ್ಕೆ ತೆಗೆದುಕೊಂಡಿದ್ದರು.ಬಂಧಿತರಲ್ಲಿ ತುಳಜಾಪುರದ ಚಾಂದ್, ಸೋಲಾಪುರದ ಪ್ರಕಾಶ ಹಾಗೂ ವಲ್ಲೇಪುರ ತಾಂಡಾದ ರವೀಂದ್ರ ಮತ್ತು ಮೋಹನ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಚಾಂದ್ ಮೃತಪಟ್ಟಿದ್ದ. ಉಳಿದ ಮೂವರ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆ ನಡೆಸಿ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಜನವಾಡ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಶ್ರೀನಿವಾಸ ಅಲ್ಲಾಪುರ ಅವರು ಪ್ರಕರಣದ ತನಿಖಾಧಿಕಾರಿ ಆಗಿದ್ದರು. ಸರ್ಕಾರದ ಪರವಾಗಿ ಪ್ರಶಾಂತ ಪ್ರಭಾ ವಾದ ಮಂಡಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.