ಶುಕ್ರವಾರ, ಮಾರ್ಚ್ 5, 2021
30 °C

ಅಕ್ರಮ ಪಡಿತರ ದಾಸ್ತಾನು: ವ್ಯಕ್ತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಕ್ರಮ ಪಡಿತರ ದಾಸ್ತಾನು: ವ್ಯಕ್ತಿ ಬಂಧನ

ಧಾರವಾಡ: ಇಲ್ಲಿಯ ಮಣಕಿಲ್ಲಾದ ಗೋದಾ­ಮಿನಲ್ಲಿ ಪಡಿತರ ಚೀಟಿದಾರರಿಗೆ ಪೂರೈಸಬೇಕಿದ್ದ ಗೋಧಿ ಹಾಗೂ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಆರೋಪಿಯನ್ನು ಶಹರ ಠಾಣೆ ಪೊಲೀಸರು ಭಾನುವಾರ ಸಂಜೆ ಬಂಧಿಸಿದ್ದಾರೆ.ಮಾಳಾಪುರದ ಜಾಫರ್ ಜೈಲಾನಿ ಅಮ್ಮಿನ­ಬಾವಿ ಬಂಧಿತ. ಈತ ಸೂಪರ್ ಮಾರ್ಕೆಟ್‌ನಲ್ಲಿ ಅಂಗಡಿ ಇಟ್ಟುಕೊಂಡಿದ್ದಾನೆ. ಇತ್ತೀಚೆಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸೇರಿದ 13 ಚೀಲ ಗೋದಿ, 4 ಚೀಲ ಅಕ್ಕಿಯನ್ನು ಜಾಫರ್, ತನ್ನ ಮಣಕಿಲ್ಲಾದ ಗೋದಾಮಿನಲ್ಲಿ ದಾಸ್ತಾನು ಮಾಡಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದ ಪೊಲೀಸರು, 17 ಕ್ವಿಂಟಾಲ್‌ ಧಾನ್ಯಗಳನ್ನು ವಶಪಡಿಸಿಕೊಂಡಿದ್ದಾರೆ.ಎಸಿಪಿ ಎಚ್.ಎಸ್.ಕೇರಿ ಅವರ ಮಾರ್ಗ­ದರ್ಶನದಲ್ಲಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಬಸವೇಶ್ವರ ಹೀರಾ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಇನ್‌ಸ್ಪೆಕ್ಟರ್‌ ಶೇಖರಪ್ಪ ಹಾಗೂ ಸಿಬ್ಬಂದಿ ಇದ್ದರು.ಅಮರಗೋಳದಲ್ಲೂ ಪರಿಶೀಲನೆ

ಹುಬ್ಬಳ್ಳಿ: ಇಲ್ಲಿನ ಬಂಕಾಪುರ ಚೌಕದ ಗೋದಾ­ಮಿನಲ್ಲಿ ಪಡಿತರ ಅಕ್ಕಿ ವಶಪಡಿಸಿಕೊಂಡ ಪ್ರಕರಣಕ್ಕೆ ಪೂರಕವಾಗಿ ಅಮರಗೋಳದ ಎಪಿಎಂಸಿ ಪ್ರಾಂಗಣದಲ್ಲಿರುವ ಉಗ್ರಾಣವೊಂದರ ಮೇಲೆ ಎಸಿಪಿ ಯಶೋದಾ ಒಂಟಗೋಡಿ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು.ಬಂಕಾಪುರ ಚೌಕದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಎಪಿಎಂಸಿ ಪ್ರಾಂಗಣದ ಆ ಉಗ್ರಾಣದಿಂದ ಖರೀದಿಸಲಾಗಿತ್ತು ಎಂಬ ಮಾಹಿತಿಯ ಹಿನ್ನೆಲೆಯಲ್ಲಿದಾಳಿ ನಡೆಸಲಾಗಿತ್ತು. ದಾಳಿಯ ವೇಳೆ ಪಡಿತರ ಅಕ್ಕಿ ಸೇರಿದಂತೆ ಯಾವುದೇ ಧಾನ್ಯಗಳ ಅಕ್ರಮ ದಾಸ್ತಾನು ಕಂಡುಬರಲಿಲ್ಲ ಎನ್ನಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.