ಬುಧವಾರ, ಮೇ 25, 2022
31 °C

ಅಕ್ರಮ ಮದ್ಯಮಾರಾಟ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ತಾಲ್ಲೂಕಿನ ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ತಿಮ್ಮಪ್ಪಯ್ಯನಹಳ್ಳಿ ರಾಜಣ್ಣ ತಾಲ್ಲೂಕು ಆಡಳಿತವನ್ನು ಒತ್ತಾಯಿಸಿದರು.ಚಳ್ಳಕೆರೆ ತಾಲ್ಲೂಕು ಕೆರೆಯಾಗಳಹಳ್ಳಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಮಹಿಳಾ ಸಂಘಗಳು ಮಂಗಳವಾರ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.ಪ್ರತಿ ಹಳ್ಳಿಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಇದರಿಂದಾಗಿ, ಸರ್ಕಾರದ ಲಕ್ಷಾಂತರ ರೂಪಾಯಿ ಬೊಕ್ಕಸಕ್ಕೆ ನಷ್ಟವಾಗುತ್ತಿದ್ದರೂ ತಾಲ್ಲೂಕು ಆಡಳಿತ ಕೈಕಟ್ಟಿ ಕುಳಿತಿದೆ ಎಂದು ಅವರು ಹರಿಹಾಯ್ದರು.ಮಹಾಲಕ್ಷ್ಮೀ ಮಹಿಳಾ ಸಂಘದ ಕಾಂತಮ್ಮ ಮಾತನಾಡಿ, ದುಡಿಯುವ ಕೈಗಳಿಗೆ ಉದ್ಯೋಗ ನೀಡುವ ಸರ್ಕಾರ ಮೌನವಹಿಸಿದೆ. ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಆಗುತ್ತಿದ್ದರೂ, ಅಧಿಕಾರಿಗಳ ಮೌನದಿಂದ ಎಷ್ಟೋ ಕುಟುಂಬಗಳು ಬೀದಿಗೆ ಬಂದಿವೆ ಎಂದರು.ಗ್ರಾಮದಲ್ಲಿ ಯಾವುದೇ ಮದ್ಯ ಮಾರಾಟಕ್ಕೆ ಅವಕಾಶ ನೀಡದಂತೆ ತಾಲ್ಲೂಕು ಆಡಳಿತ ಬಿಗಿಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಂತರ ತಹಶೀಲ್ದಾರ್ ಅಲ್ಕೂರಬೋವಿ ಅವರಿಗೆ ಮನವಿ ಸಲ್ಲಿಸಿದರು.ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಕೆ.ಬಿ. ಬೋರಯ್ಯ, ರವಿಕುಮಾರ್, ಪಿ.ಡಿ. ಕುಮಾರ್ ಇನ್ನಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.